More

    ಆರ್ಥಿಕವಾಗಿ ಹಿಂದುಳಿದವರಿಗೆ ಬೇಕು ಮೀಸಲಾತಿ; ಸಾಮಾನ್ಯ ವರ್ಗಗಳ ಶೇ.10 ಮೀಸಲಾತಿ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಕಿಡಿ

    ಸಾಗರ: ಆರ್ಥಿಕವಾಗಿ ಹಿಂದುಳಿದಿರುವ ಸಾಮಾನ್ಯ ವರ್ಗಗಳಿಗೆ ಶೇ. 10ರಷ್ಟು ಮೀಸಲಾತಿ ಮುಂದುವರಿಸಬೇಕು ಎಂದು ತಾಲೂಕು ಬ್ರಾಹ್ಮಣ ಮಹಾಸಭಾ ರಾಜ್ಯ ಸರ್ಕಾರವನ್ನು ಆಗ್ರಹಪಡಿಸಿದೆ. ಮೀಸಲಾತಿ ಹಿಂತೆಗೆದುಕೊಂಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಶನಿವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
    ಕೇಂದ್ರ ಸರ್ಕಾರ ಶೇ.10 ಮೀಸಲಾತಿ ನೀಡಿದ್ದು ನಮಗೆ ಅತ್ಯಂತ ಸಂತೋಷ ತಂದಿತ್ತು. ಡಬ್ಬಲ್ ಇಂಜಿನ್ ಸರ್ಕಾರ ಬಂದರೆ ಒಳ್ಳೆಯದು ಎಂದು ಪ್ರಧಾನ ಮಂತ್ರಿಗಳು ಹೇಳುತ್ತಾರೆ. ಆದರೆ ರಾಜ್ಯದಲ್ಲಿ ಒಂದು ಇಂಜಿನ್ ಹಳಿ ತಪ್ಪಿದೆ. ಕೇಂದ್ರ ಸರ್ಕಾರ ಹಿಂದುಳಿದ ಸಾಮಾನ್ಯ ವರ್ಗಗಳಿಗೆ ನೀಡಿದ ಶೇ. 10 ಮೀಸಲಾತಿಯನ್ನು ಹಿಂದಕ್ಕೆ ಪಡೆಯುವ ಮೂಲಕ ಕೇಂದ್ರದ ನಿರ್ಧಾರಕ್ಕೆ ತದ್ವಿರುದ್ದವಾಗಿ ನಡೆದುಕೊಳ್ಳುತ್ತಿದೆ ಎಂದು ಮಹಾಸಭಾದ ಅಧ್ಯಕ್ಷ ರವೀಶ್ ಟೀಕಿಸಿದರು.
    ಬ್ರಾಹ್ಮಣ ಸಮುದಾಯಕ್ಕೆ ಅನ್ಯಾಯ ಮಾಡಿದರೆ ಮುಂದಿನ ಚುನಾವಣೆಯಲ್ಲಿ ನಾವು ಕಠಿಣ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುವುದಿಲ್ಲ. ಸಮುದಾಯದಲ್ಲಿ ಕಡುಬಡವರು ಇದ್ದು, ನೀಡಿರುವ ಶೇ.10 ಮೀಸಲಾತಿಯನ್ನು ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
    ಮೀಸಲಾತಿಯಲ್ಲಿ ಹಸ್ತಕ್ಷೇಪ ಮಾಡಿ, ಸಂವಿಧಾನದ ಆಶಯವನ್ನು ಮೂಲೆಗುಂಪು ಮಾಡಿರುವ ರಾಜ್ಯ ಸರ್ಕಾರದ ಧೋರಣೆ ಖಂಡನೀಯ. ಮೇಲ್ವರ್ಗದಲ್ಲೂ ಬಡವರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಅಂಥವರಿಗೆ ಶೇ. 10 ಮೀಸಲಾತಿ ಸ್ವಲ್ಪ ಪ್ರಮಾಣದ ಆಸರೆಯಾಗುತಿತ್ತು. ಆದರೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಕೊಟ್ಟ ಮೀಸಲಾತಿ ಹಿಂದಕ್ಕೆ ಪಡೆದಿರುವುದು ದುರದೃಷ್ಟಕರ ಎಂದು ಕೆ.ಎಚ್.ಸುದರ್ಶನ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts