More

    ಆರ್ಥಿಕ ನೆರವಿಗೆ ಅರ್ಜಿ

    ಚಿತ್ರದುರ್ಗ:ಒಂದನೇ ತರಗತಿಯಿಂದ ವೃತ್ತಿಪರ ಶಿಕ್ಷಣವಲ್ಲದ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ಹವಾಲ್ದಾರ್ ರ‌್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು ಕೇಂದ್ರಿಯ ಸೈನಿಕ ಮಂಡಳಿಯಿಂದ ಆರ್ಥಿಕ ನೆರವಿಗಾಗಿ ನವೆಂಬರ್ 30ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರಿಯ ಸೈನಿಕ ಮಂಡಳಿಯ ಜಾಲತಾಣ ONLINE.KSB.GOV.IN  ಆರ್ಥಿಕ ನೆರವು ಎಂಬ ಶೀರ್ಷಿಕೆಯಡಿಯಲ್ಲಿ ಅರ್ಜಿ ಸಲ್ಲಿಸಬೇಕು. ಮಂಡಳಿ ಮಾರ್ಗಸೂಚಿಯಂತೆ ಅರ್ಜಿ ಸಲ್ಲಿಸಿದವರು ಅರ್ಜಿ ಹಾಗೂ ಮೂಲ ದಾಖಲೆಗಳೊಂದಿಗೆ ಶಿವಮೊಗ್ಗ ದಲ್ಲಿರುವ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಗೆ ಖುದ್ದು ಭೇಟಿ ನೀಡಿ ಅನುಮೋದನೆ ಪಡೆಯಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08182-220925ನ್ನು ಸಂಪರ್ಕಿಸುವಂತೆ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts