More

    ಆರ್ಥಿಕ ಸಬಲತೆಗೆ ಸಹಕಾರ ಮುಖ್ಯ, ಅಪರ ಜಿಲ್ಲಾಧಿಕಾರಿ ವಿಜಯಾ ಇ. ರವಿಕುಮಾರ್ ಸೂಚನೆ, ಸ್ವಸಹಾಯ ಗುಂಪಿನ ಸಾಧಕಿಯರಿಗೆ ಸನ್ಮಾನ

    ಬೆಂಗಳೂರು ಗ್ರಾಮಾಂತರ: ಸ್ವ-ಸಹಾಯ ಸಂಘಗಳ ಎಲ್ಲ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಬ್ಯಾಂಕ್‌ಗಳ ಸಹಕಾರ ಮುಖ್ಯವಾಗಿದ್ದು, ಸಲ್ಲಿಕೆಯಾಗುವ ಅರ್ಜಿಗಳನ್ನು ತಡಮಾಡದೆ ಶೀಘ್ರ ವಿಲೇವಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಾ ಇ. ರವಿಕುಮಾರ್ ಹೇಳಿದರು.

    ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ದೇವನಹಳ್ಳಿ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸ್ವ-ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ಹಲವು ಮಹಿಳಾಪರ ಯೋಜನೆ ಜಾರಿಗೊಳಿಸಿದ್ದು, ಅದರ ಸದ್ಬಳಕೆಯಾಗಬೇಕು ಎಂದರು.

    ಜಿಲ್ಲೆಯಲ್ಲಿರುವ ಸ್ವ-ಸಹಾಯ ಸಂಘಗಳು ಹಾಗೂ ಒಕ್ಕೂಟಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಗಳಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಡೇ-ಎನ್‌ಆರ್‌ಎಲ್‌ಎಂ ಸಂಜೀವಿನಿ, ಡೇ-ನಲ್ಮ್ ಯೋಜನೆಯಡಿ ಮಹಿಳೆಯಲು ಸ್ವಾವಲಂಬಿ ಬದುಕು ರೂಪಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರ ಉತ್ತೇಜನ ನೀಡುತ್ತಿರುವುದು ಸ್ವಾಗತಾರ್ಹ ಎಂದು ಜಿಲ್ಲಾ ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಶಾಲಿನಿ ಹೇಳಿದರು.

    ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸ್ತ್ರೀ ಶಕ್ತಿ ಗುಂಪುಗಳು ಮತ್ತು ಒಕ್ಕೂಟಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾಡಳಿತ ಭವನದ ಒಳಾವರಣದಲ್ಲಿ ಸ್ವ-ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟದ ಸ್ಟಾಲ್‌ಗಳನ್ನು ಅಧಿಕಾರಿಗಳು ವೀಕ್ಷಿಸಿದರು.

    ಪ್ರಶಸ್ತಿ ಪ್ರದಾನ: ರಾಷ್ಟ್ರ ಮತ್ತು ರಾಜ್ಯಮಟ್ಟದ ಆತ್ಮ ನಿರ್ಭರ ಸಂಘಟನ ಪ್ರಶಸ್ತಿಗೆ ಭಾಜನರಾದ ಹೊಸಕೋಟೆ ತಾಲೂಕಿನ ಚೇತನ ಸಂಜೀವಿನಿ ಗ್ರಾಪಂಮಟ್ಟದ ಒಕ್ಕೂಟ ಹಾಗೂ ಜಿಲ್ಲಾಮಟ್ಟದ ಆತ್ಮ ನಿರ್ಭರ ಸಂಘಟನ ಪ್ರಶಸ್ತಿಗೆ ಆಯ್ಕೆಯಾದ ದೇವನಹಳ್ಳಿ ತಾಲೂಕಿನ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟದ ಸದಸ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅತ್ಯುತ್ತಮ ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿ, ಅತ್ಯುತ್ತಮ ಮುಖ್ಯ ಪುಸ್ತಕ ಬರಹಗಾರರು, ಅತ್ಯುತ್ತಮ ಸಂಜೀವಿನಿ ಗ್ರಾಪಂಮಟ್ಟದ ಒಕ್ಕೂಟದ ಅಧ್ಯಕ್ಷರು, ಸ್ವಚ್ಛತಾ ವಾಹಿನಿಯ ಮಹಿಳಾ ಚಾಲಕರು, ಘನತ್ಯಾಜ್ಯ ನಿರ್ವಹಣೆಯ ಸಂಜೀವಿನಿ ಒಕ್ಕೂಟ, ಮಹಿಳಾ ಸ್ನೇಹಿ ಕಾರ್ಯನಿರ್ವಾಹಕ ಅಧಿಕಾರಿಗಳು, ಮಹಿಳಾ ಸ್ನೇಹಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಮಹಿಳಾ ಸ್ನೇಹಿ ಬ್ಯಾಂಕ್ ವ್ಯವಸ್ಥಾಪಕರು, ಕೃಷಿ ಚಟುವಟಿಕೆಯಡಿ ಸಾಧನೆ ಮಾಡಿದ ಮಹಿಳಾ ಸದಸ್ಯರು, ಕೃಷಿಯೇತರ ಚಟುವಟಿಕೆಯಡಿ ಸಾಧನೆ ಮಾಡಿದ ಮಹಿಳಾ ಸದಸ್ಯರು, ಒಗ್ಗೂಡಿಸುವಿಕೆಯಡಿ ಅತ್ಯುತ್ತಮ ಸಾಧನೆ ಮಾಡಿದ ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟ ಹಾಗೂ ಅತ್ಯುತ್ತಮ ಸಖಿ ಬರಹಗಾರರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts