More

    ಆರ್ಥಿಕ ಸ್ಪಂದನ ಸಮಾರಂಭ 13ರಂದು

    ಧಾರವಾಡ: ಸಹಕಾರ ಇಲಾಖೆ, ಕೋವಿಡ್ 19ರ ಸಂಕಷ್ಟದ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೂಪಿಸಿದ ವಿವಿಧ ಯೋಜನೆಗಳಡಿ ಬೆಳಗಾವಿ ಪ್ರಾಂತದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ಗಳು ಹಾಗೂ ಜಿಲ್ಲಾ ಸಹಕಾರ ಹಾಲು ಒಕ್ಕೂಟಗಳ ಸಹಯೋಗದಲ್ಲಿ ನ. 13ರಂದು ಬೆಳಗ್ಗೆ 10.30ಕ್ಕೆ ನಗರದ ಡಾ. ಮಲ್ಲಿಕಾರ್ಜುನ ಮನಸೂರ ಕಲಾಭವನದಲ್ಲಿ ‘ಆರ್ಥಿಕ ಸ್ಪಂದನ’ ಸಾಲ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಸಿಸಿ ಬ್ಯಾಂಕ್ ಅಧ್ಯಕ್ಷ ಬಾಪುಗೌಡ ಪಾಟೀಲ ಹೇಳಿದರು.

    ನಗರದ ರಾಯಾಪುರದ ಕೆಎಂಎಫ್ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಬೆಳಗಾವಿ ವಿಭಾಗದಲ್ಲಿ ವಿವಿಧ ಯೋಜನೆಗಳಲ್ಲಿ ಸುಮಾರು 9,500 ಕೋಟಿ ರೂ. ಸಾಲ ವಿತರಿಸಲಾಗಿದೆ. ರೈತರು, ಹೈನುಗಾರಿಕೆ, ಕುರಿ ಹಾಗೂ ಆಡು ಸಾಕಾಣಿಕೆದಾರರು, ಮೀನುಗಾರರು, ಬೀದಿಬದಿ ವ್ಯಾಪಾರಿಗಳು, ಮಹಿಳಾ ಸ್ವ ಸಹಾಯ ಗುಂಪುಗಳ ಸದ್ಯಸರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ನೆರವು ಪಡೆಯಲಿದ್ದಾರೆ. ಅಂದಾಜು 22 ಕೋಟಿ ರೂ.ಗಳ ಸಾಲಗಳ ಚೆಕ್​ಗಳನ್ನು ವಿತರಿಸಲು ಆರ್ಥಿಕ ಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

    ಸಹಕಾರ ಸಚಿವ ಎಸ್.ಟಿ. ಸೋಮಶೇಖರ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್, ಜಿ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ, ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಜಿಲ್ಲೆಯ ಶಾಸಕರು ಉಪಸ್ಥಿತರಿರುವರು ಎಂದರು.

    ಧಾರವಾಡ ಕೆಎಂಎಫ್ ಅಧ್ಯಕ್ಷ ಬಸವರಾಜ ಅರಬಗೊಂಡ, ಕೆಸಿಸಿ ಬ್ಯಾಂಕ್ ನಿರ್ದೇಶಕರಾದ ಜಿ.ಪಿ. ಪಾಟೀಲ, ಮಲ್ಲಿಕಾರ್ಜುನ ಹೊರಕೇರಿ, ಉಮೇಶ ಬೂಮಣ್ಣವರ, ಉಪಾಧ್ಯಕ್ಷ ಎಸ್.ವೈ. ಪಾಟೀಲ, ಇತರರು ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts