More

    ಆರ್‌ಎಸ್‌ಎಸ್ ವಿರುದ್ಧದ ಹೇಳಿಕೆಗೆ ಬದ್ಧ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ

    ಚನ್ನಪಟ್ಟಣ : ಆರ್‌ಎಸ್‌ಎಸ್ ಬಗ್ಗೆ ನಾನು ನೀಡಿರುವ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಅವರ ಅಜೆಂಡಾಗಳ ಬಗ್ಗೆ ಚರ್ಚೆ ನಡೆಸಲು ನಾನು ಸಿದ್ಧನಿದ್ದೇನೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಚರ್ಚೆಗೆ ಬರಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಪಂಥಾಹ್ವಾನ ನೀಡಿದರು.
    ಮೈಲಾನಾಯಕ್ಕನಹೊಸಹಳ್ಳಿಯಲ್ಲಿ ಶುಕ್ರವಾರ ನೂತನ ಶಾಲಾ ಕಟ್ಟಡ ಉದ್ಘಾಟಿಸಿದ ನಂತರ ವಾತನಾಡಿ ಅವರು, ಆರ್‌ಎಸ್‌ಎಸ್, ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧ ವಾಕ್ಸಮರ ನಡೆಸಿದರು.
    ನಾನು ವಾಸ್ತವತೆಯ ಆಧಾರದ ಮೇಲೆ ಆ ಮಾತುಗಳನ್ನು ಹೇಳಿದ್ದೇನೆ. ಆರ್‌ಎಸ್‌ಎಸ್ ಪ್ರಚಾರಕರೇ ಒಬ್ಬ ಲೇಖಕನ ಮುಂದೆ ಹೇಳಿರುವುದನ್ನು ನಾನು ಹೇಳಿದ್ದೇನೆಯೇ ಹೊರತು ಮತ್ತೇನು ಅಲ್ಲ. ನನ್ನ ಹೇಳಿಕೆ ವಿರೋಧಿಸುತ್ತಿರುವವರು ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲೆಸೆದರು.
    ಆರ್‌ಎಸ್‌ಎಸ್ ಇಲ್ಲದಿದ್ದರೆ ಭಾರತ ಪಾಕಿಸ್ತಾನವಾಗುತ್ತಿತ್ತು ಎಂದು ಸಚಿವ ಈಶ್ವರಪ್ಪ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಕುವಾರಸ್ವಾಮಿ, ಸ್ವಾಂತಂತ್ರ್ಯ ಬಂದಾಗ ಈಶ್ವರಪ್ಪ ಹುಟ್ಟಿದ್ದರಾ, ಆ ಸಮಯದಲ್ಲಿ ಯಾರ‌್ಯಾರು ಏನು ಕೊಡುಗೆ ನೀಡಿದ್ದಾರೆ ಎಂದು ಈಶ್ವರಪ್ಪ ಅವರಿಗೆ ಏನು ಗೊತ್ತು. ಆರ್‌ಎಸ್‌ಎಸ್ ಬಂದು ಭಾರತ ಪಾಕಿಸ್ತಾನವಾಗುವುದನ್ನು ತಪ್ಪಿಸಿದರಾ ಎಂದು ಟಾಂಗ್ ನೀಡಿದರು.
    ಕಳೆದ ಕೆಲದಿನದ ಹಿಂದೆ ಕಾಶ್ಮೀರದಲ್ಲಿ ಪಂಡಿತರು, ಶಿಕ್ಷಕರು ಹಾಗೂ ನಾಗರಿಕರನ್ನು ಗುಂಡಿಕ್ಕಿ ಕೊಲ್ಲಲಾಗಿದೆ. ಅಲ್ಲಿನ ಶಾಲೆಗೆ ನುಗ್ಗಿರುವ ಭಯೋತ್ಪಾದಕರು ಶಿಕ್ಷಕರನ್ನೂ ಕೊಂದಿದ್ದಾರೆ. ಜೆಡಿಎಸ್ ವರಿಷ್ಠರಾದ ದೇವೇಗೌಡರು ದೇಶದ ಪ್ರಧಾನಿಯಾಗಿದ್ದ ಅವಧಿಯಲ್ಲಿ ದೇಶದಲ್ಲಿ ನಾಗರಿಕರ ಮೇಲೆ ಒಂದು ಗುಂಡು ಹಾರಿಸಿದ ಟನೆ ನಡೆದಿತ್ತಾ? ಎಂದು ಪ್ರಶ್ನಿಸಿದ ಅವರು, ಸರ್ಕಾರ ನಡೆಸುವುದು ಹೇಗೆ ಎಂದು ಇದೇನಾ ನಿಮಗೆ ಆರ್‌ಎಸ್‌ಎಸ್ ಹೇಳಿಕೊಟ್ಟಿರುವುದು ಎಂದು ಪ್ರಶ್ನಿಸಿದರು.
    ಕಾಂಗ್ರೆಸ್ ನಾಯಕರ ಜತೆ ವಾದ ವಾಡಿದ ರೀತಿ ಬಿಜೆಪಿಗರು, ನನ್ನ ಜತೆ ಚರ್ಚೆಗೆ ಬರುವುದು ಬೇಡ. ನಾನು ಆಧಾರರಹಿತವಾಗಿ ವಾತನಾಡುವುದಿಲ್ಲ. ಆರ್‌ಎಸ್‌ಎಸ್ ಹಾಗೂ ಬಿಜೆಪಿ ಕಾಶ್ಮೀರವನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
    ಎರಡು ಕ್ಷೇತ್ರಗಳನ್ನು ಗೆಲ್ಲುತ್ತೇವೆ : ಹಾನಗಲ್ ಮತ್ತು ಸಿಂಧಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್‌ಗೆ ಉತ್ತಮ ವಾತಾವರಣವಿದೆ. ಸಿಂಧಗಿಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುವ ಸೂಚನೆ ಇದ್ದು, ಹಾನಗಲ್‌ನಲ್ಲಿ ಪೈಪೋಟಿ ನೀಡಲಿದ್ದೇವೆ ಎಂದು ಎಚ್‌ಡಿಕೆ ತಿಳಿಸಿದರು. ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಸಲು ಕಾಂಗ್ರೆಸ್ ನಾಯಕರು ಅಪಪ್ರಚಾರ ನಡೆಸುತ್ತಿದ್ದಾರೆ. ಹಾಗಾಗಿ, ನಮ್ಮ ಪಕ್ಷವನ್ನು ಬಿಜೆಪಿಯ ಬಿ ಟೀಂ ಅಂತಾರೆ.., ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿದ್ದಾರೆ ಅಂತಾರೆ, ಜೆಡಿಎಸ್ ಎಲ್ಲಿ ಸ್ಟ್ರಾಂಗ್ ಇದೆಯೋ ಅಲ್ಲಿ ಪಕ್ಷ ಬೆಂಬಲಿಸಿ. ಎಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಮುಂದೆ ಇದೆ ಅಲ್ಲಿ ಅಲ್ಪಸಂಖ್ಯಾತ ಕಾರ್ಯಕರ್ತರು ಕಾಂಗ್ರೆಸ್ ಬೆಂಬಲಿಸಿ ಎಂದು ಬಹಿರಂಗವಾಗಿ ಹೇಳಿದ್ದೇನೆ. ಕಾಂಗ್ರೆಸ್‌ನಂತೆ ನಾನು ಹೀನಾಯ ರಾಜಕೀಯ ಮಾಡಲ್ಲ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ಜೆಡಿಎಸ್ ವಿರುದ್ಧ ಸಿದ್ದರಾಮಯ್ಯ ಟೀಕೆಗೆ ಉತ್ತರಿಸಿದ ಎಚ್‌ಡಿಕೆ, ಸಿದ್ದರಾಮಯ್ಯ ಅವರ ರೀತಿ ನಾನು ಕುಲಗೆಟ್ಟ ರಾಜಕೀಯ ವಾಡಲ್ಲ. ರಾಜ್ಯದಲ್ಲಿ ಜಾತ್ಯಾತೀತ ಶಕ್ತಿ ಉಳಿಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿಸಿ ಅಂತಾ ಹೇಳಿದ್ದೇನೆ. ಸಿದ್ದರಾಮಯ್ಯ ಅವರು ಜೆಡಿಎಸ್ ವಿರುದ್ಧ ಅಪಪ್ರಚಾರ ಮಾಡಿ ಕೀಳುಮಟ್ಟದ ರಾಜಕೀಯ ಏನು ಎಂಬುದನ್ನು ಪ್ರದರ್ಶನ ವಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಹೃದಯ ವೈಶಾಲ್ಯತೆ ಇಲ್ಲ ಎಂದು ಕಿಡಿಕಾರಿದರು.
    ಪಕ್ಷದ ಮುಖಂಡರಾದ ಹಾಪ್‌ಕಾಮ್ಸ್ ದೇವರಾಜು, ಸಿಂ.ಲಿಂ.ನಾಗರಾಜು, ಎಸ್.ಲಿಂಗೇಶ್‌ಕುವಾರ್, ವಾಕಳಿ ವಿನೋದ್‌ಕುವಾರ್, ಮಂಕುಂದ ನಂದೀಶ್, ಜಿಪಂ ವಾಜಿ ಸದಸ್ಯ ರುಕುವಾರ್, ತಾಪಂ ವಾಜಿ ಸದಸ್ಯರಾದ ಗುರುಕುವಾರ್, ನಗರಸಭೆ ಸದಸ್ಯರಾದ ಪ್ರಶಾಂತ್, ಶ್ರೀನಿವಾಸಮೂರ್ತಿ ಇದ್ದರು.

    ಉಪ ಚುನಾವಣೆಯಲ್ಲಿ ಯಾರನ್ನೊ ಓಲೈಸಿಕೊಳ್ಳಲು ಕಾರ್ಯಾಗಾರ ಮಾಡಿಲ್ಲ. ಓಲೈಸೊ ರಾಜಕಾರಣ ಬಿಜೆಪಿಯದ್ದು. ಹಿಂದುತ್ವದ ಹೆಸರಿನಲ್ಲಿ ಸಂದೇಶ ಕೊಡಲು ಬಿಜೆಪಿ ಹೊರಟಿದೆ. ಹಿಂದುತ್ವದ ರಾಜಕಾರಣ  ಮಾಡಿಕೊಂಡು ಮತಗಳಿಗೊಸ್ಕರ ನಾನು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿಲ್ಲ.
    ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

    ಜೆಡಿಎಸ್ ಅಧಿಕಾರಕ್ಕೆ
    ಮುಂದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್
    ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಾಗಾರ ವಾಡಿದ್ದೇನೆ. ದೇಶಗಳಲ್ಲಿ ನಡೆಯುತ್ತಿರುವ ಟನೆಗಳನ್ನು ಜನತೆ ಮುಂದೆ ಇಡಲು ಪ್ರಾರಂಭ
    ವಾಡಿದ್ದೇನೆ. ಇದನ್ನು ಇಲ್ಲಿಗೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಕಾರ್ಯಾಗಾರಗಳನ್ನು ಮಾಡುವ ಮೂಲಕ ಜನರಿಗೆ ಮನವರಿಕೆ ಮಾಡುವ ಕೆಲಸ ವಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ
    ಎಂದು ಕುಮಾರಸ್ವಾಮಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts