More

    ಆಶಾ ಕಾರ್ಯಕರ್ತೆಯರಿಗೆ ಭದ್ರತೆ ನೀಡಿ

    ಉಪ್ಪಿನಬೆಟಗೇರಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಶಾ ಕಾರ್ಯಕರ್ತೆಯರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರಿಯಾಂಕಾ ಚವ್ಹಾಣ ಮೂಲಕ ಆರೋಗ್ಯ ಸಚಿವರು, ಮುಖ್ಯಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ಮನೆಗಳ ಸರ್ವೆ ವೇಳೆ ಕೆಲ ಪುಂಡರು, ಮದ್ಯವ್ಯಸನಿಗಳ ಕಿರುಕುಳ ಹೆಚ್ಚಾಗಿದೆ. ಇದರ ವಿರುದ್ಧ ಹೋರಾಡಲು ಮೇ 29 ಅನ್ನು ಆಶಾ ಸಂರಕ್ಷಣಾ ದಿನ ಎಂದು ಘೊಷಿಸಿ ರಾಜ್ಯವ್ಯಾಪಿ ಹೋರಾಟಕ್ಕೆ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಕರೆ ಕೊಟ್ಟಿದೆ. ಕೂಡಲೆ ಸರ್ಕಾರ ಆಶಾ ಕಾರ್ಯಕರ್ತೆಯರಿಗೆ ಭದ್ರತೆ ಒದಗಿಸಬೇಕು. ಸದ್ಯ ನೀಡುತ್ತಿರುವ ಗೌರವ ಧನದಲ್ಲಿ ಕುಟುಂಬ ನಡೆಸುವುದು ಕಷ್ಟವಾಗಿದೆ. ಮಾರ್ಚ್​ನಿಂದ ಕೋವಿಡ್-19 ಕಾರ್ಯ ಮುಗಿಯುವವರೆಗೆ ವಿಶೇಷ ಪ್ಯಾಕೇಜ್ ಘೊಷಿಸಬೇಕು. ಆರೋಗ್ಯ ರಕ್ಷಣೆಗೆ ಅಗತ್ಯ ಮಾಸ್ಕ್, ಸ್ಯಾನಿಟೈಸರ್ ಒದಗಿಸಬೇಕು. ಕೋವಿಡ್-19 ನಿಯಂತ್ರಣಕ್ಕೆ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಮೃತಪಟ್ಟ

    ಆಶಾ ಕಾರ್ಯಕರ್ತೆಯ ಕುಟುಂಬಕ್ಕೆ ವಿಮೆ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಗೀತಾ ಓರಣಕರ, ಕವಿತಾ ಕಿತ್ತೂರ, ವನಿತಾ ಶಿನಗಾರಿ, ರೂಪಾ ಈಸರಗೊಂಡ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts