More

    ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದ ಆರೋಗ್ಯ ದೀವಿಗೆ: ಶಾಸಕ ಹರತಾಳು ಹಾಲಪ್ಪ

    ಸಾಗರ: ಆಶಾ ಕಾರ್ಯಕರ್ತೆಯರು ಗ್ರಾಮೀಣ ಭಾಗದ ಆರೋಗ್ಯ ದೀವಿಗೆ. ನಿಮ್ಮ ಆರೋಗ್ಯ ಸೇವೆಯಿಂದ ತಳಮಟ್ಟದ ವ್ಯಕ್ತಿಗಳಿಗೂ ಗುಣಮಟ್ಟದ ಆರೋಗ್ಯ ಸೇವೆ ಸಿಗುವಂತಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.
    ನಗರಸಭೆಯ ರಂಗಮಂದಿರದಲ್ಲಿ ಸೋಮವಾರ ತಾಲೂಕು ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಕಷ್ಟದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕೈಗೊಂಡ ಸೇವೆಯನ್ನು ದೇಶವೇ ಮೆಚ್ಚಿಕೊಂಡಿದೆ. ಆರೋಗ್ಯ ಇಲಾಖೆಯ ಯೋಜಿತ ಎಲ್ಲಾ ಕಾರ್ಯಕ್ರಮಗಳ ವಿವರಗಳನ್ನು ಜನತೆಗೆ ತಲುಪಿಸಿ ಅರಿವು ಮೂಡಿಸುವ ಕೆಲಸ ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ. ಸರ್ಕಾರದ ಯೋಜನೆಗಳು ಅದರಲ್ಲಿಯೂ ಆರೋಗ್ಯ ಇಲಾಖೆಯ ಅನುಕೂಲತೆಗಳು ನಿಜವಾದ ಫಲಾನುಭವಿಗಳನ್ನು ತಲುಪುವಲ್ಲಿ ಇವರ ಪಾತ್ರ ದೊಡ್ಡದು ಎಂದರು.
    ಮಂಗನ ಕಾಯಿಲೆ ಕಾಣಿಸಿಕೊಂಡಾಗ ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸುವಲ್ಲಿ ಅವಿರತವಾಗಿ ದುಡಿದಿದ್ದಾರೆ. ಪ್ರಧಾನಿ ಅವರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸುವಂತೆ ನೀಡಿದ ಸೂಚನೆ ಹಿನ್ನೆಲೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿನಂದಿಸುವ ಕೆಲಸ ಮಾಡಲಾಗುತ್ತಿದೆ. ಸರ್ಕಾರ ಕೊಡುತ್ತಿರುವ ಗೌರವ ಧನ ಅತ್ಯಂತ ಕಡಿಮೆಯಾಗಿದೆ. ನಿಮ್ಮ ಸೇವೆಗೆ ತಕ್ಕ ಸಂಭಾವನೆ ಸಿಗುತ್ತಿಲ್ಲ ಎನ್ನುವ ಬೇಸರ ನನಗೂ ಇದೆ. ಈ ನಿಟ್ಟಿನಲ್ಲಿ ನಿಮ್ಮ ಪರವಾಗಿ ಸದನದ ಒಳಗೆ ಮತ್ತು ಹೊರಗೆ ಧ್ವನಿ ಎತ್ತಲಾಗುತ್ತದೆ. ಆಶಾ ಕಾರ್ಯಕರ್ತೆಯರ ವಿವಿಧ ಬೇಡಿಕೆ ಈಡೇರಿಕೆಗೆ ಸರ್ಕಾರದ ಮೇಲೆ ಒತ್ತಡ ತರಲಾಗುತ್ತದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts