More

    ಆಶಾ ಕಾರ್ಯಕರ್ತೆಯರ ಪ್ರತಿಭಟನೆ

    ಕಲಬುರಗಿ: 12 ಸಾವಿರ ರೂ. ಗೌರವಧನ ಖಾತ್ರಿಪಡಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
    ಕೋವಿಡ್-19 ವಿರುದ್ಧದ ಹೋರಾಟಕ್ಕೆ ಅಗತ್ಯ ಸುರಕ್ಷತಾ ಸಾಮಗ್ರಿ ನೀಡಬೇಕು. ಕರೊನಾಕ್ಕೆ ತುತ್ತಾದ ಆಶಾಗೆ ಪರಿಹಾರ, ಉಚಿತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು.
    ಸರ್ಕಾರಕ್ಕೆ ಹತ್ತಾರು ಮನವಿಪತ್ರ ಸಲ್ಲಿಸಲಾಗಿದ್ದು, ಎರಡ್ಮೂರು ದಿನಗಳಲ್ಲಿ ಸರ್ಕಾರದ ನಿರ್ಧಾರ ತಿಳಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದರು. ಆದರೆ ಈವರೆಗೆ ಯಾವುದೇ ಸ್ಪಂದನೆ ದೊರೆತಿಲ್ಲ. ಹೀಗಾಗಿ 29ರಂದು ರಾಜ್ಯವ್ಯಾಪಿ ಬೃಹತ್ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
    ಜಿಲ್ಲಾಧ್ಯಕ್ಷ ವಿ.ಜಿ.ದೇಸಾಯಿ, ಕಾರ್ಯದರ್ಶಿ ಎಸ್.ಎಂ. ಶರ್ಮಾ , ಉಪಾಧ್ಯಕ್ಷ ಶಿವಲಿಂಗಮ್ಮ ನಂದೂರ, ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯ ಈರಣ್ಣ ಇಸಬಾ, ಜಿಲ್ಲಾಧ್ಯಕ್ಷ ಹಣಮಂತ ಎಚ್.ಎಸ್., ರೇವಣಸಿದ್ದ, ನಾಗೇಶ ವಾಡಿ ಇತರರಿದ್ದರು. ಕಲಬುರಗಿ,

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts