More

    ಆ.15ರೊಳಗೆ ಘನತ್ಯಾಜ್ಯ ವಿಲೇ ಘಟಕಗಳು ಆರಂಭ

    ಶಿಡ್ಲಘಟ್ಟ: ಸ್ವಚ್ಛಭಾರತ ಮಿಷನ್ ಯೋಜನೆಯಡಿ ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಆ.15 ರೊಳಗೆ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಕಾರ್ಯಾರಂಭಗೊಳಿಸಲಾಗುವುದು ಎಂದು ಜಿಪಂ ಸಿಇಒ ೌಜಿಯಾ ತರನ್ನುಮ್ ತಿಳಿಸಿದರು.

    ನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆ ಆವರಣದಲ್ಲಿರುವ ರೇಷ್ಮೆ ಉತ್ಪಾದಕರ ಕಂಪನಿಗೆ ಬುಧವಾರ ಭೇಟಿ ನೀಡಿ ಮಾತನಾಡಿದ ಅವರು, ನಗರದ ಮಾದರಿಯಲ್ಲಿ ಗ್ರಾಮೀಣ ಭಾಗಗಳಲ್ಲಿಯೂ ನಿತ್ಯ ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ ಒಣ ಮತ್ತು ಹಸಿಕಸವನ್ನು ಪ್ರತ್ಯೇಕಗೊಳಿಸಿ, ಗೊಬ್ಬರ ತಯಾರಿಸುವ ಯೋಜನೆ ರೂಪಿಸಲಾಗಿದೆ ಎಂದರು.

    ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗಿತ್ತು. ಆದರೆ, ಕೆಲ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ ಜಾಗ ಲಭ್ಯವಿಲ್ಲದ್ದರಿಂದ ಕನಿಷ್ಠ 3 ಪಂಚಾಯಿತಿಗಳಿಗೆ ಸಮೀಪದಲ್ಲಿರುವ ಸರ್ಕಾರಿ ಜಮೀನಿನಲ್ಲಿ ಘಟಕ ನಿರ್ಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.

    ರೇಷ್ಮೆ ರೈತ ಉತ್ಪಾದಕರ ಕಂಪನಿಗೆ ಜಮೀನು ಮಂಜೂರು ಮಾಡಲು ಮತ್ತು ಬೆಳೆಗಾರರಿಗೆ ಮತ್ತಷ್ಟು ಸೌಲಭ್ಯ ಕಲ್ಪಿಸಲು, ಸಾಲ ಸೌಲಭ್ಯ ಒದಗಿಸಲು ಕಂಪನಿ ನಿರ್ದೇಶಕರ ಮನವಿ ಸ್ವೀಕರಿಸಿದ್ದು ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗುವುದು ಎಂದು ಸಿಇಒ ಭರವಸೆಯಿತ್ತರು.

    ಜಿಪಂ ರೇಷ್ಮೆ ಉಪನಿರ್ದೇಶಕ ಬೈರಪ್ಪ, ಸರ್ಕಾರಿ ರೇಷ್ಮೆಗೂಡು ಮಾರುಕಟೆ ಉಪನಿರ್ದೇಶಕ ಸುಭಾಷ್ ಸಾತೇನಹಳ್ಳಿ, ರೇಷ್ಮೆ ಸಹಾಯಕ ನಿರ್ದೇಶಕರಾದ ರಾಮಕುಮಾರ್, ನರಸಿಂಹಮೂರ್ತಿ, ರಾಮಕೃಷ್ಣಪ್ಪ, ವಿಸ್ತರಣಾಧಿಕಾರಿ ಕಾಂತರಾಜ್, ರೇಷ್ಮೆ ರೈತ ಉತ್ಪಾದಕರ ಕಂಪನಿ ಅಧ್ಯಕ್ಷ ವೆಂಕಟಸ್ವಾಮಿರೆಡ್ಡಿ, ಸಿಇಒ ಜನಾರ್ಧನ್‌ಮೂರ್ತಿ, ನಿರ್ದೇಶಕರಾದ ಎಚ್.ಕೆ.ಸುರೇಶ್, ಶ್ರೀನಿವಾಸ್, ದೇವರಾಜು, ಮೊಹ್ಮದ್ ಅನ್ವರ್, ರೆಹಮಾನ್, ಅನ್ಸರ್‌ಖಾನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts