More

    ಆ.15 ರೊಳಗೆ ನಾಮಫಲಕ ಅಳವಡಿಸಿ

    ಚಿಕ್ಕಬಳ್ಳಾಪುರ : ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಅಪರ ಜಿಲ್ಲಾಧಿಕಾರಿ ಎಚ್.ಅಮರೇಶ್ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಸಭೆ ನಡೆಸಿ, ಬಸ್ ನಿಲ್ದಾಣ, ಶಾಲಾ ಕಾಲೇಜು, ಅಂಗಡಿ, ಹೋಟೆಲ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ತಂಬಾಕು ಸೇವನೆ ಮಾಡುವವರಿಗೆ ನಿರ್ದಾಕ್ಷಿಣ್ಯವಾಗಿ ದಂಡ ಹಾಕಬೇಕು.

    ಅಗತ್ಯವಿರುವೆಡೆ ಆ.15ರೊಳಗೆ ನಾಮಫಲಕಗಳನ್ನು ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದರು. ತಂಬಾಕು ಸೇವನೆಯಿಂದ ವ್ಯಸನಿಗೆ ಮಾತ್ರವಲ್ಲ ನೆರೆ-ಹೊರೆಯವರಿಗೆ, ಕುಟುಂಬದ ಇತರ ಸದಸ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ, 18 ವರ್ಷ ವಯೋಮಾನದೊಳಗಿನವರಿಗೆ ತಂಬಾಕು ಉತ್ಪನ್ನಗಳನ್ನು ಮಾರದಂತೆ ಹಾಗೂ ದುಶ್ಚಟಗಳನ್ನು ಮೈಗೂಡಿಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕೆಂದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಯಲ್ಲಾ ಆರ್.ರಮೇಶ್ ಬಾಬು ಇದ್ದರು.

     

     

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts