More

    ಇಂಗ್ಲಿಷ್, ಹಿಂದಿಯಲ್ಲಿ ಅರ್ಜಿ ಆಹ್ವಾನಕ್ಕೆ ಆಕ್ಷೇಪ

    ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಸಮಿತಿ ಬಿ ಮತ್ತು ಸಿ ದರ್ಜೆಯ 20 ಸಾವಿರ ಹುದ್ದೆಗಳ ನೇಮಕಾತಿಗೆ ಇಂಗ್ಲಿಷ್ ಹಾಗೂ ಹಿಂದಿಯಲ್ಲಿ ಅರ್ಜಿ ಆಹ್ವಾನಿಸಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ರಮೇಶ್​ಗೆ ಮಂಗಳವಾರ ಮನವಿ ಸಲ್ಲಿಸಿದರು.

    ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಅರಸ್ ಮಾತನಾಡಿ, ಅರ್ಜಿ ಸಲ್ಲಿಸುವಿಕೆಯಿಂದ ಹಿಡಿದು ಎಲ್ಲ ಹಂತದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ನಡೆಯುತ್ತಿದೆ. ಇದು ಕನ್ನಡಿಗರನ್ನು ಉದ್ಯೋಗಾವಕಾಶದಿಂದ ತಡೆಯುವ ಹುನ್ನಾರವಾಗಿದೆ. ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ವಲಯವಾರು ಮತ್ತು ಕನ್ನಡದಲ್ಲಿ ನಡೆಸಿದರೆ ಅನುಕೂಲವಾಗುತ್ತದೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts