More

    ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

    ಮಂಡ್ಯ : ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.31ರಿಂದ ಪ್ರಾರಂಭವಾಗಲಿದ್ದು, ಜಿಲ್ಲೆಯಲ್ಲಿ 21,036 ಅಭ್ಯರ್ಥಿಗಳು ನೋಂದಣಿಯಾಗಿದ್ದಾರೆ. ಇತ್ತ ಪರೀಕ್ಷೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
    31ರಿಂದ ಆರಂಭಗೊಳ್ಳುವ ಪರೀಕ್ಷೆಯು ಏ.15ರವರೆಗೆ ನಡೆಯಲಿದೆ. ಎಲ್ಲ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭದಲ್ಲಿ ಮಕ್ಕಳ ಆರೋಗ್ಯ ಪರೀಕ್ಷೆಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಲಾಗಿದೆ. ತುರ್ತು ಚಿಕಿತ್ಸೆ ಇದ್ದರೆ ವೈದ್ಯರನ್ನು ಕರೆಸಿ ಚಿಕಿತ್ಸೆ ಕೊಡಿಸಲಾಗುತ್ತದೆ. ಅಂಗವಿಕಲ ಮಕ್ಕಳಿಗೆ ಕೆಳಂತಸ್ತಿನ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
    ಇನ್ನು ಜಿಲ್ಲೆಯಲ್ಲಿ 475 ಶಾಲೆಗಳ 10,653 ಬಾಲಕರು, 9903 ಬಾಲಕಿಯರು ಸೇರಿದಂತೆ 20,556 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇದಲ್ಲದೆ 261 ಖಾಸಗಿಯಾಗಿ ಹೊಸ ಅಭ್ಯರ್ಥಿಗಳು, 41 ಜನ ಪುನರಾವರ್ತಿತ, 170 ಜನ ಖಾಸಗಿ ಪುನರಾವರ್ತಿತ, 8 ಜನ ನ್ಯೂ ಸ್ಕೀಂ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಒಟ್ಟು 21,036 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. ಒಟ್ಟಾರೆ ಇವರಲ್ಲಿ 10,963 ಬಾಲಕರು, 10,073 ಬಾಲಕಿಯರಾಗಿದ್ದಾರೆ.
    ಮದ್ದೂರು ತಾಲೂಕಿನಲ್ಲಿ 16, ಮಂಡ್ಯ ದಕ್ಷಿಣ ವಲಯ, ಮಳವಳ್ಳಿಯಲ್ಲಿ ತಲಾ 16, ಕೆ.ಆರ್.ಪೇಟೆ, ನಾಗಮಂಗಲ, ಶ್ರೀರಂಗಪಟ್ಟಣ ತಾಲೂಕಿನಲ್ಲಿ ತಲಾ 9, ಪಾಂಡವಪುರದಲ್ಲಿ 8, ಮಂಡ್ಯ ಉತ್ತರ ವಲಯ ವ್ಯಾಪ್ತಿಯಲ್ಲಿ 5 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 83 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ್ನ ಘೋಷಿಸಿ, ಜೆರಾಕ್ಸ್/ಕಂಪ್ಯೂಟರ್/ಸೈಬರ್ ಅಂಗಡಿಗಲನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಿದ್ದಾರೆ.
    ಇದಲ್ಲದೆ ಬ್ಲಾಕ್ ಹಂತದ ಒಬ್ಬ ಅಧಿಕಾರಿಯನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಜಿಲ್ಲೆಯ ಎಲ್ಲ 83 ಪರೀಕ್ಷಾ ಕೇಂದ್ರಗಳಿಗೆ ತಲಾ ಒಬ್ಬರಂತೆ ಮುಖ್ಯ ಅಧೀಕ್ಷಕ ಮತ್ತು ಕಸ್ಟೋಡಿಯನ್, ಮೊಬೈಲ್ ಸ್ವಾಧೀನಾಧಿಕಾರಿ, ಸ್ಥಾನಿಕ ಜಾಗೃತದಳದ ಅಧಿಕಾರಿ, ಜಿಲ್ಲೆಯಲ್ಲಿ ಡಿಡಿಪಿಐ, ಉಪ ಯೋಜನಾ ಸಮನ್ವಯಧಿಕಾರಿ, ಶಿಕ್ಷಣಾಧಿಕಾರಿ, ವಿಷಯ ಪರಿವೀಕ್ಷಕರನ್ನು ಒಳಗೊಂಡಂತೆ ತಲಾ ಮೂರು ಜನ ಸದಸ್ಯರಿರುವ 3 ಜಾಗೃತ ದಳ ರಚಿಸಲಾಗಿದೆ. ಪ್ರಶ್ನೆಪತ್ರಿಕೆಗಳ ಬಂಡಲ್‌ಗಳನ್ನು ಪರೀಕ್ಷಾ ಮಂಡಳಿಯ ನಿಯಮದಂತೆ ಬ್ಲಾಕ್ ಹಂತದಲ್ಲಿ ಉಪಖಜಾನೆಯಲ್ಲಿ ಇಡಲಾಗಿದೆ. ಉತ್ತರ ಪತ್ರಿಕೆಗಳ ಬಂಡಲ್‌ಗಳನ್ನು ಸಂರಕ್ಷಿಸಲು ಡಿಡಿಪಿಐ ಕಚೇರಿಯಲ್ಲಿ ಭದ್ರತಾ ಕೊಠಡಿ ನಿರ್ಮಿಸಲಾಗಿದೆ. ವಿಷಯ ಶಿಕ್ಷಕರಲ್ಲದವರನ್ನು ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾಕರಾಗಿ ನೇಮಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts