More

    ಇಂದಿರಾ ದಿಟ್ಟ ಆಡಳಿತಗಾರ್ತಿ – ದಿನೇಶ್ ಕೆ. ಶೆಟ್ಟಿ ಅಭಿಮತ

    ದಾವಣಗೆರೆ: ವಿಶ್ವದಲ್ಲಿ ಭಾರತವನ್ನು ಗುರುತಿಸುವಂತೆ ದಿಟ್ಟ ಆಡಳಿತ ನಡೆಸಿದ ಕೀರ್ತಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‌್ಯದರ್ಶಿ ದಿನೇಶ್ ಕೆ. ಶೆಟ್ಟಿ ಹೇಳಿದರು.
    ಜಿಲ್ಲಾ ಕಾಂಗ್ರೆಸ್‌ನಿಂದ ಪಕ್ಷದ ಕಚೇರಿ ಶಾಮನೂರು ಶಿವಶಂಕರಪ್ಪ ಭವನದಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಜನ್ಮದಿನಾಚರಣೆ ಕಾರ‌್ಯಕ್ರಮದಲ್ಲಿ ಮಾತನಾಡಿದರು.
    1965ರ ಭಾರತ-ಪಾಕಿಸ್ತಾನ ಯುದ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಇಂದಿರಾಗಾಂಧಿ ಅವರು ಶ್ರೀನಗರದ ಗಡಿ ಪ್ರದೇಶದಲ್ಲಿ ವಿಹಾರ ನಡೆಸಿದ್ದರು. ಪಾಕಿಸ್ತಾನಿ ದಂಗೆಕೋರರು ನಗರದ ಹತ್ತಿರಕ್ಕೆ ನುಸುಳಿ ಬಂದಿದ್ದಾರೆ ಎಂದು ಸೇನೆಯು ಎಚ್ಚರಿಕೆ ನೀಡಿದರೂ, ಅದನ್ನು ಲೆಕ್ಕಿಸದ ಅವರು ಜಮ್ಮು ಅಥವಾ ದೆಹಲಿಗೆ ವಾಸ್ತವ್ಯ ಸ್ಥಳಾಂತರಿಸಲು ನಿರಾಕರಿಸಿ ಪಾಕಿಸ್ತಾನದ ದಾಳಿ ಯಶಸ್ವಿಯಾಗಿ ಹಿಮ್ಮೆಟ್ಟಿಸಿದ ದಿಟ್ಟ ಮಹಿಳೆ ಎಂದರು.
    ಜಿಲ್ಲಾ ಪ್ರಧಾನ ಕಾರ‌್ಯದರ್ಶಿ ಎಸ್. ಮಲ್ಲಿಕಾರ್ಜುನ್ ಮಾತನಾಡಿ, ಇಂದಿರಾಗಾಂಧಿ ಅವರು ಬಡವರ ಪರ ಇದ್ದರೂ ಎಂಬುದಕ್ಕೆ ಅವರು ರೂಪಿಸಿದ ಅನೇಕ ಕಾರ‌್ಯಕ್ರಮಗಳೇ ಸಾಕ್ಷಿ ಎಂದು ತಿಳಿಸಿದರು.
    ಮುಖಂಡ ಘನಿ ತಾಹಿರ್ ಮಾತನಾಡಿ, ಇಂದಿರಾಗಾಂಧಿ ಅವರ ಆಡಳಿತ ಸುವರ್ಣ ಯುಗ. ದೇಶದ ಪ್ರತಿಯೊಬ್ಬರಿಗೂ ಅನ್ನ, ಆಶ್ರಯ, ಬಟ್ಟೆ ದೊರೆಯಲು ರೂಪಿಸಿದ ಯೋಜನೆಗಳು ಇಂದಿಗೂ ಬಡವರಿಗೆ ಅನುಕೂಲವಾಗಿವೆ ಎಂದರು.
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಯುವ ಕಾಂಗ್ರೆಸ್‌ನ ಎಲ್.ಎಂ. ಎಚ್ ಸಾಗರ್, ಪರಮೇಶ್, ರಾಕೇಶ್, ಯುವರಾಜ್, ಕವಿತಾ ಚಂದ್ರಶೇಖರ್, ಗೀತಾ ಪ್ರಶಾಂತ್, ದಾಕ್ಷಾಯಣಮ್ಮ, ಸುನಿತಾ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts