More

    ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ

    ಬಾಳೆಹೊನ್ನೂರು: ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾರಥೋತ್ಸವದ ಅಂಗವಾಗಿ ಮಾ.5ರಂದು ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಹಾಗೂ ರೇಣುಕಾಚಾರ್ಯ ಜಯಂತಿ ಸಮಾರಂಭ ನಡೆಯಲಿದೆ. ಭಾನುವಾರ ಬೆಳಿಗ್ಗೆ 11ಕ್ಕೆ ರಂಭಾಪುರಿ ಡಾ. ಶ್ರೀ ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಸಮಾರಂಭ ಜರುಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶ್ರೀಪೀಠದ ಪ್ರತಿಷ್ಠಿತ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು.

    ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ರಂಭಾಪುರಿ ಬೆಳಗು ಕೃತಿ ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಿ.ವೈ.ರಾಘವೇಂದ್ರ, ಸಚಿವ ಸಿ.ಸಿ.ಪಾಟೀಲ, ವಿ.ಸುನೀಲ್​ಕುಮಾರ್, ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕ ಸಿ.ಟಿ.ರವಿ, ಟಿ.ಡಿ.ರಾಜೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಪ್ರಮುಖರಾದ ಬೇಳೂರು ರಾಘವೇಂದ್ರ ಶೆಟ್ಟಿ, ಬಸಯ್ಯ ಕಾಡಯ್ಯ ಹಿರೇಮಠ, ಡಾ.ಕೃಷ್ಣಾರೆಡ್ಡಿ, ಸಿ.ಮೃತ್ಯುಂಜಯಸ್ವಾಮಿ, ಮಲ್ಲಿಕಾರ್ಜುನ ಬಿ.ಗುಂಗೆ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

    ಯುಗಮಾನೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿದ ಗಣ್ಯರಿಗೆ ಗೌರವ ಗುರುರಕ್ಷೆ ನೀಡಲಾಗುವುದು. ಸಮಾರಂಭಕ್ಕೂ ಮುನ್ನ ಶ್ರೀಪೀಠದಲ್ಲಿ ನಿರ್ವಿುಸಲು ಸಂಕಲ್ಪಿಸಿರುವ 51 ಅಡಿ ಎತ್ತರದ ರೇಣುಕಾಚಾರ್ಯ ಮಂಗಲಮೂರ್ತಿ ಕಾರ್ಯಾರಂಭದ ಶಿಲಾನ್ಯಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದಾರೆ. ರಂಭಾಪುರಿ ಮೂಲಪೀಠದ ನವೀಕರಣದ ಶಿಲಾನ್ಯಾಸವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಲಿದ್ದಾರೆ. ಶ್ರೀಪೀಠದ ಮುಂಭಾಗ ನಿರ್ಮಾಣ ಮಾಡಿರುವ ನೂತನ ಕಾಂಕ್ರೀಟ್ ರಸ್ತೆಯನ್ನು ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸಲಿದ್ದಾರೆ.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts