More

    ಇಂದ್ರಧನುಷ್ ಲಸಿಕಾಕರಣ ಯಶಸ್ವಿಗೊಳಿಸಿ  -ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಸೂಚನೆ

    ದಾವಣಗೆರೆ: ಮಿಷನ್ ಇಂದ್ರಧನುಷ್ ಲಸಿಕಾಕರಣವು ಸೆ.12 ರಿಂದ 16 ರವೆಗೆ ನಡೆಯಲಿದ್ದು, ಅಂಗನವಾಡಿಗಳಿಲ್ಲದ ಜನವಸತಿ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನೇಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ ಅಧಿಕಾರಿಗಳಿಗೆ ಹೇಳಿದರು.
    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತೀವ್ರತರವಾದ ಮಿಷನ್ ಇಂದ್ರಧನುಷ್ ಲಸಿಕಾಕರಣದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    5 ವರ್ಷದೊಳಗಿನ ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ ಇಂದ್ರಧನುಷ್ ಲಸಿಕೆ ನೀಡಲಾಗುತ್ತಿದೆ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆದ ಮಕ್ಕಳ ಮಾಹಿತಿ ಸಂಗ್ರಹಿಸಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು ಎಂದರು.
    ಲಸಿಕೆ ನೀಡುವಾಗ ಯಾವುದೇ ಲೋಪ ಆಗಬಾರದು. ತಾಯಂದಿರಿಗೆ ಲಸಿಕೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಮಕ್ಕಳಿಗೆ ಲಸಿಕೆ ಕೊಡಬೇಕು. ಆರೋಗ್ಯ ಇಲಾಖೆಯು ಕ್ರಿಯಾತ್ಮ್ಮಕ ಜಾಹೀರಾತು ನೀಡುವ ಮೂಲಕ ಜನರಲ್ಲಿ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು
    ಈ ಅಭಿಯಾನದಲ್ಲಿ ಲಸಿಕೆ ಪಡೆಯದೇ ವಂಚಿತರಾಗಿರುವ, ಬಿಟ್ಟು ಹೋಗಿರುವ, ಪ್ರದೇಶಗಳು ಮತ್ತು ಸಮುದಾಯಗಳನ್ನು ಗುರುತಿಸಿ ಅವರಿಗೆ ಚುಚ್ಚುಮದ್ದು ಹಾಕಲು ಗುರಿ ಹೊಂದಬೇಕು ಎಂದು ಹೇಳಿದರು.
    ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ ನಿರ್ದೇಶನದಂತೆ ಎರಡನೇ ಹಂತದ ಕಾರ್ಯಕ್ರಮ ಇದಾಗಿದೆ. ನಿಗದಿತ ಪೋರ್ಟಲ್‌ನಲ್ಲಿ ಲಸಿಕೆ ವಿವರ ದಾಖಲಿಸಿ ಇ-ಲಸಿಕಾಕರಣದ ಪ್ರಮಾಣ ಪತ್ರ ಸೃಜಿಸಲಾಗುವುದು ಎಂದು ತಿಳಿಸಿದರು.
    ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಷಣ್ಮುಖಪ್ಪ, ಡಾ. ರೇಣುಕಾರಾಧ್ಯ. ಡಾ.ಗಂಗಾಧರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts