More

    ಇಂಧನ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

    ಗದಗ: ಇಂಧನ ಬೆಲೆ ಏರಿಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಸೋಮವಾರ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಪಾಟೀಲ ಮಾತನಾಡಿ, ಕಳೆದ 22 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಕರೊನಾ ಪರಿಣಾಮ ಉದ್ಯೋಗ ಇಲ್ಲದೆ ಪರದಾಡುತ್ತಿರುವ ಮಧ್ಯಮ ವರ್ಗದ ಜನತೆ ಹಾಗೂ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿರುವ ರೈತರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರಕ್ಕೆ ಬಡ ಜನರ ಮೇಲೆ ನಿಜವಾದ ಕಳಕಳಿ ಇದ್ದರೆ ಕೂಡಲೇ ತೈಲ ಬೆಲೆಯನ್ನು ಇಳಿಸಬೇಕು ಎಂದು ಒತ್ತಾಯಿಸಿದರು.

    ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇದೀಗ ಬ್ಯಾರಲ್​ಗೆ 20-30 ಡಾಲರ್​ಗೆ ಮಾರಾಟವಾಗುತ್ತಿದೆ. ಹೀಗಿರುವಾಗ ಪೆಟ್ರೋಲ್, ಡೀಸೆಲ್ ಲೀಟರ್​ಗೆ 25-30 ರೂ. ಮಾರಾಟವಾಗಬೇಕಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಮಾಜಿ ಸಚಿವ ಬಿ.ಆರ್. ಯಾವಗಲ್, ಜಿಪಂ ಅಧ್ಯಕ್ಷ ರಾಜುಗೌಡ ಕೆಂಚನಗೌಡ್ರ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ಜಿಪಂ ಉಪಾಧ್ಯಕ್ಷೆ ಮಲ್ಲವ್ವ ಬಿಚ್ಚೂರ, ಸದಸ್ಯರಾದ ಸಿದ್ಧಲಿಂಗೇಶ್ವರ ಪಾಟೀಲ, ಈರಪ್ಪ ನಾಡಗೌಡ್ರ, ಶೋಭಾ ಮೇಟಿ, ಗದಗ ಜಿಪಂ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೀಲಮ್ಮ ಬೋಳನವರ, ಜಿಲ್ಲಾ ಕಾಂಗ್ರೆಸ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಬಸವರಾಜ ಕಡೇಮನಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts