More

    ಇನ್ನೊಂದು ವಾರದಲ್ಲಿ ಕಸದ ಸಮಸ್ಯೆಗೆ ಪರಿಹಾರ: ಶಾಸಕ ಎಚ್.ಪಿ. ಸ್ವರೂಪ್ ಭರವಸೆ

    ಹಾಸನ:  ನಗರಸಭೆ ವ್ಯಾಪ್ತಿಯ ಹಲವು ವಾರ್ಡ್‌ಗಳಲ್ಲಿ ಕಸ ವಿಲೇವಾರಿ ಬಗ್ಗೆ ಸಾಕಷ್ಟು ಸಮಸ್ಯೆಗಳಾಗುತ್ತಿದ್ದು, ಇನ್ನೊಂದು ವಾರದಲ್ಲಿ ಸಭೆ ನಡೆಸಿ ಕಸ ಸಮಸ್ಯೆ ಪರಿಹರಿಸಲಾಗುವುದು ಎಂದು ಶಾಸಕ ಎಚ್.ಪಿ. ಸ್ವರೂಪ್ ಭರವಸೆ ನೀಡಿದರು.
    ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಿಂದ ಬಡಾವಣೆಯ ಪಾರ್ಕ್‌ನಲ್ಲಿ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ಎಚ್.ಪಿ. ಸ್ವರೂಪ್, ನನ್ನ ಮೇಲೆ ಪ್ರೀತಿ, ವಿಶ್ವಾಸ ಇಟ್ಟು ಮತ ನೀಡಿ, ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದಿರಾ. ನಿಮಗೆಲ್ಲರಿಗೂ ನಿಮಗೆಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದು ಹೇಳಿದರು.
    ವಿಜಯನಗರ ಬಡಾವಣೆ ನಿರ್ಮಾಣ ಕಾರ್ಯದಲ್ಲಿ ನಮ್ಮ ತಂದೆ ದಿವಂಗತ ಎಚ್.ಎಸ್. ಪ್ರಕಾಶ್ ಅವರ ಪಾತ್ರ ಪ್ರಮುಖವಾದದ್ದು. ಈ ನಗರಕ್ಕೆ ಹಲವು ಮೂಲಸೌಕರ್ಯವನ್ನು ಕಲ್ಪಿಸಿಕೊಡುವಲ್ಲಿ ಅವರು ಶ್ರಮಿಸಿದ್ದಾರೆ. ನಾನು ಕೂಡ ಮುಂದಿನ ದಿನಗಳಲ್ಲಿ ಈ ಬಡಾವಣೆಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಒಳಚರಂಡಿ, ಯುಜಿಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ತಿಳಿಸಿದರು.
    ನಗರದ ಹಲವು ವಾರ್ಡ್‌ಗಳಲ್ಲಿ ಕಸ ವಿಲೇವಾರಿ ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಎರಡು ಮೂರು ದಿನಗಳಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜತೆಗೆ ಸಂಗ್ರಹಿಸಿದ ಕಸವನ್ನು ಶೀಘ್ರದಲ್ಲಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.
    ಕಾರ್ಯಕ್ರಮದಲ್ಲಿ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಾರಾಯಣಗೌಡ, ಉಪಾಧ್ಯಕ್ಷ ಮಲ್ಲಿಕಾರ್ಜುನ್ ಮುಖಂಡರಾದ ಚಂದ್ರೇಗೌಡ, ನಿಂಗೇಗೌಡ, ಶಿವ ಶಾಂತಪ್ಪ, ತಿಮ್ಮೇಗೌಡ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts