More

    ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸಂಶೋಧನಾ ಸಮ್ಮೇಳನ

    ಆನಂದಪುರ: ವಿದ್ಯಾರ್ಥಿಗಳಲ್ಲಿ ಹುದುಗಿರುವ ಸಂಶೋಧನಾ ಪ್ರವೃತ್ತಿಯಿಂದ ಕೃಷಿ ಕ್ಷೇತ್ರಕ್ಕೆ ನಿರಂತರವಾಗಿ ನೆರವಾಗುವಂತೆ ನೋಡಿಕೊಳ್ಳಬೇಕು ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ರಾಜೇಂದ್ರಪ್ರಸಾದ್ ಹೇಳಿದರು.
    ಇರುವಕ್ಕಿಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಏರ್ಪಡಿಸಿದ್ದ ಒಂದು ದಿನದ ರಾಷ್ಟ್ರೀಯ ಮಟ್ಟದ ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಶೋಧನಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ರೈತರು ದೇಶದ ಬೆನ್ನೆಲುಬು. ಕೃಷಿಕರು ದೇಶದ ಅನ್ನದಾತರು. ರೈತರ ಪ್ರತಿನಿತ್ಯದ ಕೃಷಿ ಚಟುವಟಿಕೆಯ ಶ್ರಮ ಹಗುರಗೊಳಿಸುವ ಮತ್ತು ಕಡಿಮೆ ಖರ್ಚಿನಲ್ಲಿ ಅಧಿಕ ಆದಾಯ ಗಳಿಸುವ ತಂತ್ರಜ್ಞಾನ ನಮ್ಮೆಲ್ಲರ ನಿರೀಕ್ಷೆಯಾಗಿದೆ ಎಂದು ತಿಳಿಸಿದರು.
    ಸಮ್ಮೇಳನದಲ್ಲಿ ಭಾಗವಹಿಸಿದ್ದ 117 ಸ್ನಾತಕೋತ್ತರ ವಿದ್ಯಾರ್ಥಿಗಳು ತಾವು ಕೈಗೊಂಡ ಸಂಶೋಧನೆಯನ್ನು ಮಂಡಿಸಿದರು. ಕೀಟಶಾಸ್ತ್ರ ವಿಭಾಗದ ಶರತ್ ಕೆ.ಎನ್.ಗೆ ಪ್ರಥಮ, ಕಾರ್ತಿಕ ಸಿ.ಎಂ.ಗೆ ದ್ವಿತೀಯ ಹಾಗೂ ಉತ್ತಮ ವಿಷಯ ಮಂಡನೆಯ ಐವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ವಿವಿಧ ವಿವಿಗಳ ಉಪನ್ಯಾಸಕರು ಮತ್ತು ವಿಜ್ಞಾನಿಗಳು ಆಗಮಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts