More

    ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ವೇಳಾಪಟ್ಟಿ ಪ್ರಕಟ

    ಬಳ್ಳಾರಿ : ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಘೋಷಣೆಯಾಗಿದ್ದು, ಮೇ 09 ರಂದು ಅಧಿಸೂಚನೆ ಪ್ರಕಟವಾಗಲಿದೆ ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ತಿಳಿಸಿದರು.
    ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮೇ 16 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಮೇ.17 ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದ್ದು, ಉಮೇದುವಾರಿಕೆ ಹಿಂಪಡೆಯಲು ಮೇ. 20 ಕೊನೆಯ ದಿನವಾಗಿದೆ. ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ಜರುಗಲಿದೆ. ಜೂನ್ 6 ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ. ಜೂನ್ 12 ರಂದು ಚುನಾವಣೆ ಪ್ರಕ್ರಿಯಗಳು ಪೂರ್ಣಗೊಳ್ಳಲಿವೆ. ಈ ಚುನಾವಣೆ ಸಂಬಂಧ ಈಗಾಗಲೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಈಶಾನ್ಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರ ಆಯ್ಕೆಯಾಗಿ ನಡೆಯುವ ಈ ಚುನಾವಣೆಗೆ ಕಲಬುರ್ಗಿ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿದ್ದು, ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿ ಆಗಿರುತ್ತಾರೆ ಎಂದರು. ಜಿಲ್ಲೆಯಲ್ಲಿ 13,744 ಪುರುಷರು, 8,408 ಮಹಿಳೆಯರು, ಇತರೆ-04 ಸೇರಿದಂತೆ ಒಟ್ಟು 22,156 ಪದವೀಧರ ಮತದಾರರಿದ್ದು, ಒಟ್ಟು 16 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಕಂಪ್ಲಿ 3,539 ಮತದಾರರು, 03 ಮತಗಟ್ಟೆಗಳು. ಸಿರುಗುಪ್ಪ 3,323 ಮತದಾರರು, 04 ಮತಗಟ್ಟೆಗಳು. ಬಳ್ಳಾರಿ (ಗ್ರಾಮೀಣ) 4,604 ಮತದಾರರು, 03 ಮತಗಟ್ಟೆಗಳು. ಬಳ್ಳಾರಿ ನಗರ-7,396 ಮತದಾರರು, 03 ಮತಗಟ್ಟೆಗಳು ಹಾಗೂ ಸಂಡೂರು ತಾಲೂಕಿನಲ್ಲಿ 3,294 ಮತದಾರರಿದ್ದು, 03 ಮತಗಟ್ಟೆಗಳಿವೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಅರ್ಜಿ ಸಲ್ಲಿಸಲು ಮೇ 06 ಅಂತಿಮ ದಿನವಾಗಿದೆ ಎಂದು ಮಾಹಿತಿ ನೀಡಿದರು. ಎಡಿಸಿ ಮಹಮ್ಮದ್ ಝುಬೇರ್, ಎಎಸ್ಪಿ ನವೀನ್ ಕುಮಾರ್ ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts