More

    ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ

    ಮದ್ದೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ವಿಶ್ವಾಸ ವ್ಯಕ್ತಪಡಿಸಿದರು.
    ತಾಲೂಕಿನ ಪಣ್ಣೆದೊಡ್ಡಿಯಲ್ಲಿ ಸೋಮವಾರ ಆಯೋಜಿಸಿದ್ದ ಹನುಮಂತರಾಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಜೆಡಿಎಸ್ ಹಾಗೂ ಬಿಜೆಪಿಯ ದುರಾಡಳಿತವನ್ನು ನೋಡಿ ಬೇಸತ್ತಿರುವ ಜನರು ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡಲಿದ್ದಾರೆಂದು ಎಂದರು.
    ಕಾಂಗ್ರೆಸ್ ಪಕ್ಷ ಹಿಂದುಳಿದವರು, ಅಲ್ಪಸಂಖ್ಯಾತರು, ಕೂಲಿ ಕಾರ್ಮಿಕರು ಸೇರಿದಂತೆ ಎಲ್ಲ ವರ್ಗದರಿಗೂ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರಲಿದ್ದು, ಮತದಾರರು ಕಾಂಗ್ರೆಸ್‌ಗೆ ಅಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದರು.
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ನಾಗೇಗೌಡ್ರು, ಯೂತ್ ಅಧ್ಯಕ್ಷರಾದ ಕಿರಣ್, ಮುಖಂಡರಾದ ಗೋಪಿ, ಪುರುಷೋತ್ತಮ್, ಸನತ್‌ಕುಮಾರ್,ಲೋಕೇಶ್, ನಾಗೇಶ್, ಚನ್ನಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts