More

    ಉಕ ಜಿಲ್ಲೆಯ ನಾಲ್ವರಿಗೆ ಯಕ್ಷಗಾನ ಪ್ರಶಸ್ತಿ

    ಕಾರವಾರ: ರಾಜ್ಯ ಯಕ್ಷಗಾನ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳು ಪ್ರಕಟವಾಗಿದ್ದು, ಜಿಲ್ಲೆಯ ನಾಲ್ವರಿಗೆ ಪ್ರಶಸ್ತಿ ಲಭಿಸಿದೆ. 2022ನೇ ಸಾಲಿನ ಗೌರವ ಪ್ರಶಸ್ತಿ ಪಾರಂಪರಿಕ ಯಕ್ಷಗಾನ ಕಲಾವಿದ ಹಾಗೂ ಭಾಗವತ ಉಮೇಶ ಭಟ್ ಬಾಡ ಅವರಿಗೆ ಲಭಿಸಿದೆ. ಈ ಪ್ರಶಸ್ತಿ 50 ಸಾವಿರ ರೂ. ನಗದು ಹೊಂದಿದೆ. ರ್ಕ ಹಿರಿಯ ಪರಮಯ್ಯ ಹಾಸ್ಯಗಾರ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹುಕ್ಕಲಮಕ್ಕಿ ಕಮಲಾಕರ ಹೆಗಡೆ ಅವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು 25 ಸಾವಿರ ರೂ. ನಗದು ಹೊಂದಿದೆ. ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿಗೆ ಬಡಾಬಡಗು ಯಕ್ಷಗಾನ ಕಲಾವಿದ ಕೃಷ್ಣ ಜಿ. ನಾಯ್ಕ ಬೇಡ್ಕಣಿ, ಹಾಗೂ ಕವ್ವಾಳೆ ಗಣಪತಿ ಭಾಗವತ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಗಳು ತಲಾ 25 ಸಾವಿರ ರೂ. ನಗದು ಬಹುಮಾನ ಹೊಂದಿವೆ. ಸೆಪ್ಟೆಂಬರ್ ಎರಡು ಅಥವಾ ಮೂರನೇ ವಾರದಲ್ಲಿ ಉಡುಪಿಯ ಕಮಲಶಿಲೆಯಲ್ಲಿ ಆಯೋಜನೆಯಾಗುವ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ ಕುಮಾರ ಪ್ರಶಸ್ತಿ ನೀಡುವರು ಎಂದು ಅಕಾಡೆಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts