More

    ಉಡುಪಿಯಲ್ಲಿ ಸೋಂಕು ಹರಡಿಲ್ಲ

    ಉಡುಪಿ: ಜಿಲ್ಲೆಯಲ್ಲಿ 947 ಕರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದರೂ, ಸಮುದಾಯದಲ್ಲಿ ಹರಡಿಲ್ಲ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜಿಲ್ಲಾಮಟ್ಟದಲ್ಲಿ ಎಸ್‌ಒಪಿ ಬದಲಾವಣೆಗೆ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಒಂದು ವೇಳೆ ಗೃಹ ದಿಗ್ಬಂಧನದಲ್ಲಿ ಇರುವವರು ನಿಯಮಗಳ ಉಲ್ಲಂಘನೆ ಮಾಡಿದರೆ ಪ್ರಕರಣ ದಾಖಲಿಸಿ, ಸಾಂಸ್ಥಿಕ ದಿಗ್ಬಂಧನದಲ್ಲಿ ಇರಿಸಲಾಗುವುದು ಎಂದರು.

    ಉಡುಪಿಯಲ್ಲಿ 1306 ಬೆಡ್‌ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿಡಲಾಗಿದ್ದು, 1200 ಹೆಚ್ಚುವರಿ ಬೆಡ್‌ಗಳಿಗೆ ಸಿದ್ಧತೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1417 ಬೆಡ್‌ಗಳಿಗೆ ಸೆಂಟ್ರಲೈಸ್ಡ್ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

    ಜಿಲ್ಲಾಸ್ಪತ್ರೆ ಶೀಘ್ರ ಮೇಲ್ದರ್ಜೆಗೆ: ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಅನುದಾನ ಬಿಡುಗಡೆ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎಂದ ಸಚಿವರು, ಕೋವಿಡ್ ಸಮಸ್ಯೆ ಮುಗಿದ ಬಳಿಕ 250 ಬೆಡ್‌ಗಳ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಬಿಆರ್‌ಎಸ್ ಆಸ್ಪತ್ರೆಗೆ 6 ತಜ್ಞ ವೈದ್ಯರನ್ನು ನೇಮಕ ಮಾಡಲಾಗಿದೆ. ಹೊಸದಾಗಿ ಅಸ್ತಿತ್ವಕ್ಕೆ ಬಂದ ತಾಲೂಕುಗಳಲ್ಲಿಯೂ ತಾಲೂಕು ಆಸ್ಪತ್ರೆ ತೆರೆಯುವ ಬೇಡಿಕೆಯನ್ನು ಪರಿಗಣಿಸಲಾಗುವುದು ಎಂದರು.

    ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ.ರಘುಪತಿ ಭಟ್, ಬಿ.ಎಂ.ಸುಕುಮಾರ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಎಚ್‌ಒ ಡಾ. ಸುಧೀರ್ ಚಂದ್ರ ಸೂಡ, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ಮೊದಲಾದವರು ಉಪಸ್ಥಿತರಿದ್ದರು.

    ವಿದೇಶಿಗರಿಗೆ ಸಾಂಸ್ಥಿಕ ಕ್ವಾರಂಟೈನ್: ವಿದೇಶದಿಂದ ಆಗಮಿಸುವವರಿಗೆ 7 ದಿನಗಳ ಸಾಂಸ್ಥಿಕ ಹಾಗೂ 7 ದಿನದ ಹೋಂ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ರೈಲು ಮೂಲಕ ಮಹಾರಾಷ್ಟ್ರದಿಂದ 1100 ಮಂದಿ ಆಗಮಿಸಿದ್ದಾರೆ. ತಾಲೂಕು ಕೇಂದ್ರಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ. ಹೋಂ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದವರನ್ನು ಹಾಗೂ ಮನೆಗೆ ಹೋಗಲು ಸಾಧ್ಯವಾಗದವರನ್ನು ಇಲ್ಲಿಗೆ ಸೇರಿಸಲಾಗುವುದು. ಜಿಲ್ಲೆಯಲ್ಲಿ ಕರೊನಾ ಸಮುದಾಯಕ್ಕೆ ಹರಡಿಲ್ಲ. ಲ್ಯಾಬ್ ಟೆಕ್ನೀಷಿಯನ್ ಸಂಪರ್ಕವನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts