More

    ಉತ್ತಮ ಆರೋಗ್ಯಕ್ಕೆ ಬೇಕು ಪೌಷ್ಟಿಕ ಆಹಾರ

    ಸುರಪುರ: ಮಕ್ಕಳು ಪೌಷ್ಟಿಕ ಆಹಾರ ಸೇವನೆ ಮಾಡಿದರೆ ಮಾತ್ರ ಉತ್ತಮ ಆರೋಗ್ಯದ ಜತೆಗೆ ಸದೃಢ ದೇಹ ಬೆಳೆಯಲು ಸಾಧ್ಯ ಎಂದು ತಹಸೀಲ್ದಾರ್ ಕೆ.ವಿಜಯಕುಮಾರ ಹೇಳಿದರು.

    ರಂಗಂಪೇಟದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಧಾನಮಂತ್ರಿ ಪೋಷಣ್ ಅಭಿಯಾನ ಕಾರ‍್ಯಕ್ರಮ ಉದ್ಘಾಟಿಸಿದ ಅವರು, ಪೌಷ್ಟಿಕ ಆಹಾರ ಸೇವನೆಯಿಂದ ಮಕ್ಕಳಲ್ಲಿ ಹಿಮೋಗ್ಲೊಬಿನ್ ಹೆಚ್ಚಳವಾಗಿ ಆಮ್ಲಜನಕ ದೇಹದ ಎಲ್ಲ ಭಾಗಗಳಿಗೆ ಸರಬರಾಜು ಮಾಡುತ್ತದೆ. ಇದರಿಂದ ಮಕ್ಕಳು ಸದೃಢರಾಗಲು ಸಾಧ್ಯ ಎಂದರು.

    ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಬಸವರಾಜ ಸಜ್ಜನ್ ಮಾತನಾಡಿ, ಮಕ್ಕಳಿಗೆ ಪೌಷ್ಟಿಕ ಆಹಾರ ದೊರೆಯಲಿ ಎಂಬ ಉದ್ದೇಶದಿಂದ ೮ನೇ ತರಗತಿವರೆಗಿದ್ದ ಈ ಯೋಜನೆಯನ್ನು ಪ್ರಸಕ್ತ ವರ್ಷ ೯ ಮತ್ತು ೧೦ನೇ ತರಗತಿವರೆಗೆ ವಿಸ್ತರಿಸಲಾಗಿದೆ. ವಾರದಲ್ಲಿ ಎರಡು ದಿನ, ವರ್ಷದಲ್ಲಿ ೮೦ ದಿನ ಎಲ್ಲ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಕ್ಕಿ ನೀಡಲಾಗುವುದು ಎಂದು ತಿಳಿಸಿದರು.

    ಕ್ಷೇತ್ರ ಸಮನ್ವಯಾಧಿಕಾರಿ ಪಂಡಿತ ನಿಂಬೂರ ಪ್ರಾಸ್ತಾವಿಕ ಮಾತನಾಡಿದರು. ಕೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರು, ಪ್ರಾಚಾರ್ಯ ಬಸವರಾಜ ಕೊಡೇಕಲ್, ಉಪ ಪ್ರಾಚಾರ್ಯ ಗುರುಲಿಂಗಪ್ಪ ಖಾನಾಪುರ ಇತರರಿದ್ದರು. ಶ್ರೀನಿವಾಸ ಕುಲಕರ್ಣಿ ನಿರೂಪಣೆ ಮಾಡಿದರು. ದೈಹಿಕ ಶಿಕ್ಷಕ ಮರೆಪ್ಪ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts