More

    ಉತ್ತಮ ಮೌಲ್ಯ ಅಳವಡಿಸಿಕೊಳ್ಳಲು ಸೇವಾ ದಳ ಪೂರಕ

    ಕುಶಾಲನಗರ: ಭಾರತ ಸೇವಾದಳದ ಚಟುವಟಿಕೆಗಳಿಂದ ಸೇವಾ ಮನೋಭಾವದ ಪ್ರೇರಣೆ ಸಿಗುತ್ತದೆ ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ತಿಳಿಸಿದರು.

    ಕೂಡಿಗೆ ಸರ್ಕಾರಿ ಶಾಲಾ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಭಾರತ ಸೇವಾದಳದ ತಾಲೂಕು ಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಮಕ್ಕಳ ಮೇಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿರಿಯರು ಹಾಕಿಕೊಟ್ಟಂತಹ ಶಿಸ್ತು, ಸಂಯಮ, ದೇಶ ಪ್ರೇಮ, ಉತ್ತಮವಾದ ಗುಣ, ನಡತೆಯ ಮೌಲ್ಯಗಳನ್ನು ಮೈಗೊಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳಿಗೆ ಚೇತರಿಕೆ, ಚೈತನ್ಯದ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಪೂರಕವಾಗುತ್ತವೆ ಎಂದರು.

    ಧ್ವಜಾರೋಹಣವನ್ನು ತಾಲೂಕು ಭಾರತ ಸೇವಾದಳ ಅಧ್ಯಕ್ಷ ಎಂ.ಪಿ.ಗೋಪಾಲ ನೆರವೇರಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿದ ವಿದ್ಯಾರ್ಥಿಗಳು ರಾಷ್ಟ್ರೀಯ ಭಾವೈಕ್ಯತೆ ಸಾರುವ ಸಂದೇಶದ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

    ತಾಲೂಕು ಭಾರತ ಸೇವಾದಳದ ಅಧ್ಯಕ್ಷ ಎಂ.ಪಿ.ಗೋಪಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷೆ ಸುಮಾಸುದೀಪ್, ಕೇಂದ್ರ ಸಮಿತಿಯ ಸದಸ್ಯ ಎ.ಕೆ.ಪಾಲಾಕ್ಷ, ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಮೊಂತಿಗಣೇಶ್, ಜಿಲ್ಲಾ ಸಮಿತಿಯ ಸದಸ್ಯ ಕೊರನ ಸುನೀತಾ, ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಪ್ರಕಾಶ್, ತಾಲೂಕು ಕಾರ್ಯದರ್ಶಿ ಕರುಂಬಯ್ಯ ಹಾಜರಿದ್ದರು. ಕೂಡಿಗೆ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಯೋಗೇಶ್ ಅವರನ್ನು ಭಾರತ ಸೇವಾದಳ ವತಿಯಿಂದ ಸನ್ಮಾನಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts