More

    ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಕ್ರೀಡೆ ಸಹಕಾರಿ

    ಬೇಲೂರು: ವಿದ್ಯಾರ್ಥಿಗಳು ವಿದ್ಯೆಯ ಜತೆಗೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ತಮ್ಮ ಮುಂದಿನ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ ಹೇಳಿದರು.

    ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಮಂಗಳವಾರ ಕಾಲೇಜು ಆವರಣದಲ್ಲಿ ಅಭಿನಂದಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಮೊಬೈಲ್ ಗೀಳಿಗೆ ದಾಸರಾಗಿರುವುದು ಬೇಸರದ ಸಂಗತಿ. ಮೊಬೈಲ್‌ನಲ್ಲಿ ವಿದ್ಯಾರ್ಥಿಗಳು ವಿದ್ಯೆಗೆ ಸಹಕಾರಿಯಾದ ಮಾಹಿತಿ ಮಾತ್ರ ಪಡೆಯಬೇಕು. ಜತೆಗೆ ತಮ್ಮ ಮನಸ್ಸು, ಆರೋಗ್ಯ ಮತ್ತು ದೇಹದ ಸಮತೋಲನಕ್ಕಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

    ಕ್ರೀಡಾಕೂಟದಲ್ಲಿ ಬಿಜಿಎಸ್ ಕಾಲೇಜು ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಜಿಲ್ಲೆಯ ಅರಕಲಗೂಡು, ಚನ್ನರಾಯಪಟ್ಟಣ, ಅರಸೀಕೆರೆಯಲ್ಲಿಯೂ ಸಮಗ್ರ ಪ್ರಶಸ್ತಿ ಪಡೆದಿದೆ. ಮುಂದಿನ ಜಿಲ್ಲಾ ಮಟ್ಟದಲ್ಲೂ ಪ್ರಶಸ್ತಿ ಗಳಿಸುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಉತ್ತಮ ಸಾಧನೆ ಮಾಡಿರಿ ಎಂದು ಶುಭ ಕೋರಿದರು. ಬಿಜಿಎಸ್ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್, ದೈಹಿಕ ಶಿಕ್ಷಣ ಶಿಕ್ಷಕ ದೇವರಾಜ್, ಉಪನ್ಯಾಸಕರಾದ ಕೀರ್ತಿ, ಚಂದ್ರಶೇಖರ್, ಮಹೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts