More

    ಉತ್ತಮ ವ್ಯಕ್ತಿತ್ವದಿಂದ ಸದೃಢ ಸಮಾಜ ನಿರ್ಮಾಣ

    ನಾಪೋಕ್ಲು: ಉತ್ತಮ ವ್ಯಕ್ತಿತ್ವ ಹೊಂದಿದ ಪ್ರಜೆಗಳಿಂದ ಸದೃಢ ಸಮಾಜದ ನಿರ್ಮಾಣ ಸಾಧ್ಯ. ಹೀಗಾಗಿ ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಚೌರಿರ ಜಗತ್ ತಿಮ್ಮಯ್ಯ ಹೇಳಿದರು.

    ಸಮೀಪದ ಹೊದವಾಡದ ರಾಫಲ್ಸ್ ಇಂಟರ್ ನ್ಯಾಷನಲ್ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
    ವಿದ್ಯಾರ್ಥಿಗಳು ಮುಂದೆ ಬರಬೇಕಾದರೆ ಕೇವಲ ಶಿಕ್ಷಣ ಪಡೆದರೆ ಸಾಲದು.ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ದೇಶ-ವಿದೇಶಗಳಲ್ಲಿ ಇಂಗ್ಲಿಷ್ ಭಾಷೆಯ ಅಗತ್ಯವಿದೆ. ಆಳವಾದ ಅಧ್ಯಯನದಿಂದ ಮುಂದೆ ಬರಲು ಸಾಧ್ಯ. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಜತೆಗೆ ಪ್ರತಿಯೊಬ್ಬರೂ ಧನಾತ್ಮಕ ಚಿಂತನೆ, ಶಿಸ್ತು, ಸಮಯ ಪಾಲನೆ ಇತರ ಮಾತುಗಳನ್ನು ಆಲಿಸುವ ವ್ಯವಧಾನ ಬೆಳೆಸಿಕೊಳ್ಳಬೇಕು ಎಂದರು.

    ಮಡಿಕೇರಿಯ ಜಿಲ್ಲಾಸ್ಪತ್ರೆ ಹಿರಿಯ ವೈದ್ಯ ಅಬ್ದುಲ್ ಅಜೀಜ್ , ಖಾಲಿದ್ ಹಾಜಿ ಹಾಕತ್ತೂರು, ಶಿಕ್ಷಕ ಮೆಹಬೂಬ್ ಸಾಬ್ ಮಾತನಾಡಿದರು. ಕಾಲೇಜಿನ ಅಧ್ಯಕ್ಷ ಅಬ್ದುಲ್ಲಾ ಎಚ್. ಹಂಸ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಅಬ್ದುಲ್ ಹಮೀದ್, ಹೊದವಾಡ ಗ್ರಾಮ ಪಂಚಾಯಿತಿ ಸದಸ್ಯ ಹಂಸ, ಹೊದ್ದೂರು ಗ್ರಾಪಂ ಸದಸ್ಯ ಮೊಯಿದು, ಉದ್ಯಮಿ ಮನ್ಸೂರ್ ಆಲಿ ನಾಪೋಕ್ಲು, ಪ್ರಾಂಶುಪಾಲ ಕೆ.ಸಿ.ತನ್ವೀರ್, ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ, ಹಾಗೂ ಪಾಲಕರು ಮತ್ತಿತರರು ಪಾಲ್ಗೊಂಡಿದ್ದರು.

    ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಮೆಹಬೂಬ್ ಸಾಬ್ ಅವರನ್ನು ಸನ್ಮಾನಿಸಲಾಯಿತು. ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ಬಳಿಕ ವಿದ್ಯಾರ್ಥಿಗಳಿಂದ ನಡೆದ ವೇಷ ಭೂಷಣ ಸ್ಪರ್ಧೆ, ನೃತ್ಯ ನೆರೆದಿದ್ದ ಸಭಿಕರನ್ನು ರಂಜಿಸಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts