More

    ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣ ಅಗತ್ಯ: ಶಾಸಕ ಬಿ.ಕೆ.ಸಂಗಮೇಶ್ವರ್ ಅಭಿಮತ

    ಭದ್ರಾವತಿ: ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಬೇಕಾದರೆ ಸರ್ವರೂ ಶಿಕ್ಷಣವಂತರಾಗಬೇಕು. ಅಂತಹ ಶಿಕ್ಷಣವಂತ ಸಮಾಜ ನಿರ್ಮಾಣ ಶಿಕ್ಷಕರಿಂದ ಮಾತ್ರ ಸಾಧ್ಯ. ಪ್ರತಿ ವ್ಯಕ್ತಿಯನ್ನು ಶಿಕ್ಷಿತರನ್ನಾಗಿಸುತ್ತಿರುವ ಶಿಕ್ಷಕ ವೃಂದವನ್ನು ನಾವೆಂದೂ ಗೌರವದಿಂದ ಕಾಣಬೇಕು ಎಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು.
    ನಗರದಲ್ಲಿ ಆಯೋಜಿಸಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರು ಅನೇಕ ಸಮಸ್ಯೆ ಹಾಗೂ ಸವಾಲುಗಳ ನಡುವೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ಅದರ ಫಲವಾಗಿ ಈ ಬಾರಿ ಕ್ಷೇತ್ರದಲ್ಲಿ ಎಲ್ಲ ಶಾಲೆಗಳು ಉತ್ತಮ ಫಲಿತಾಂಶ ಪಡೆದುಕೊಂಡಿವೆ ಎಂದರು.
    ಗ್ರಾಮೀಣ ಭಾಗದಲ್ಲಿ ಇಂದಿಗೂ ಸಾಕಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅವರನ್ನು ಪತ್ತೆ ಹಚ್ಚಿ ಶಿಕ್ಷಣ ನೀಡುವ ಕೆಲಸ ಶಿಕ್ಷಕರು ಮಾಡಬೇಕಾಗಿದೆ. ಮಕ್ಕಳನ್ನು ಪಠ್ಯಕ್ಕಷ್ಟೆ ಸೀಮಿತಗೊಳಿಸದೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಕ್ರಿಯಾಶೀಲರನ್ನಾಗಿಸುವ ಹೆಚ್ಚಿನ ಹೊಣೆಗಾರಿಕೆ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು.
    ಕೇಂದ್ರದ ಮಾದರಿ ವೇತನ ಸೌಲಭ್ಯ ಸೇರಿದಂತೆ ಶಿಕ್ಷಕರ ಸಮಸ್ಯೆಗಳು ನೂರಾರಿವೆ. ನಿಮ್ಮ ಮನವಿಯನ್ನು ಸ್ವೀಕಾರ ಮಾಡಿದ್ದು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಉತ್ತಮ ಆರೋಗ್ಯ ಪೂರ್ಣ ಸಮಾಜ ನಿರ್ಮಾಣದ ಜವಾಬ್ದಾರಿ ಒತ್ತು ಕೆಲಸ ಮಾಡುವ ಪ್ರತಿ ಶಿಕ್ಷಕರು ತಮ್ಮ ಹೊಣೆಗಾರಿಕೆ ಅರಿತು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
    ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಹ ಪ್ರಾಧ್ಯಾಪಕ ಡಾ, ಚನ್ನೇಶ್, ಶಿಕ್ಷಕರ ದಿನಾಚರಣೆಯ ಮಹತ್ವ ಮತ್ತು ಪ್ರಸ್ತುತ ದಿನಗಳಲ್ಲಿ ಶಿಕ್ಷಕರು ಹಾಗೂ ಶಿಕ್ಷಣ ಕುರಿತು ಉಪನ್ಯಾಸ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರದ ಅತ್ಯುತ್ತಮ ಶಿಕ್ಷಕರು, ನಿವೃತ್ತ ಶಿಕ್ಷಕರು, ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಸಾಧನಗೈದ ಶಾಲೆಗಗಳ ಶಿಕ್ಷಕರರನ್ನು ಸನ್ಮಾನಿಸಲಾಯಿತು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts