More

    ಉದ್ಯೋಗಾಕಾಂಕ್ಷಿಗಳಿಗೆ ನೆರವಾದ ಕಾರ್ಯಾಗಾರ


    ಮಂಡ್ಯ: ಉದ್ಯೋಗಾಕಾಂಕ್ಷಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ರೈತ ಸಂ, ಆರ್ಗ್ಯಾನಿಕ್ ಮಂಡ್ಯ, ಜನಚೇತನ ಟ್ರಸ್ಟ್ ಹಾಗೂ ಇಂಡಿಯಾ ಫಾರ್ ಐಎಎಸ್ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಾಗಾರ ಯಶಸ್ವಿಯಾಯಿತು.

    ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಪ್ಲೇಸ್‌ಮೆಂಟ್ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಕುರಿತ ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ 500ಕ್ಕೂ ವಿದ್ಯಾರ್ಥಿಗಳು ಪಾಲ್ಗೊಂಡು ಮಾಹಿತಿ ಪಡೆದುಕೊಂಡರು. ಸಂಪನ್ಮೂಲ ವ್ಯಕ್ತಿಗಳು ಪರೀಕ್ಷೆ ಬಗ್ಗೆ ಸಲಹೆಗಳನ್ನು ನೀಡಿದರು.

    ಕಾರ್ಯಾಗಾರ ಉದ್ಘಾಟಿಸಿದ ಮಂಡ್ಯ ಉಪವಿಭಾಗಾಧಿಕಾರಿ ಐಶ್ವರ್ಯಾ ಮಾತನಾಡಿ, ಸ್ಪರ್ಧಾರ್ಥಿಗಳು ಸಂಕಲ್ಪ ತೊಟ್ಟು ಒಂದು ಸ್ಪಷ್ಟ ಗುರಿಯನ್ನಿಟ್ಟುಕೊಂಡು ವ್ಯವಸ್ಥಿತವಾಗಿ ಅಧ್ಯಯನ ವಾಡಬೇಕು. ಆಗ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸುಲಭವಾಗಿ ಎದುರಿಸಬಹುದು. ಜ್ಞಾನಕ್ಕಿಂತಲೂ ಮಿಗಿಲಾದದ್ದು ಮತ್ತೊಂದಿಲ್ಲ.ಸತತ ಅಭ್ಯಾಸ, ಶಿಸ್ತು, ಸಂಯಮ, ಆತ್ಮವಿಶ್ವಾಸ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತಿ ಮುಖ್ಯ. ಸಮೃದ್ಧವಾಗಿರುವ ಮಂಡ್ಯ ಜಿಲ್ಲೆ ಎಲ್ಲ ಕ್ಷೇತ್ರಗಳಲ್ಲೂ ಅದ್ವಿತೀಯ ಸಾಧನೆ ವಾಡಿದೆ. ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳ ವಿಚಾರದಲ್ಲಿ ವಿದ್ಯಾರ್ಥಿಗಳು ಹೆಚ್ಚು ಒಲವು ತೋರುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಇಂಡಿಯಾ ಫಾರ್ ಐಎಎಸ್ ಅಕಾಡೆಮಿ ಸಂಸ್ಥಾಪಕ ಪಿ.ಸಿ.ಶ್ರೀನಿವಾಸ್ ಮಾತನಾಡಿ, ಯು ಜನತೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವು ಮೂಡಿಸಿ ಅವರಿಗೆ ತರಬೇತಿ ನೀಡಿ ಉನ್ನತ ಹುದ್ದೆ ಅಲಂಕರಿಸುವಂತೆ ವಾಡಬೇಕೆಂಬುದು ಅಕಾಡೆಮಿ ಹಾಗೂ ಸಹಯೋಗ ನೀಡಿರುವ ಸಂಘಟನೆಗಳ ಮೂಲ ಉದ್ದೇಶ. ಬಡ ಪ್ರತಿಭಾವಂತ ಮಕ್ಕಳು ಕೂಡ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂಬ ಉದ್ದೇಶವಿಟ್ಟುಕೊಂಡು ಅಕಾಡೆಮಿ ಸ್ಥಾಪಿಸಲಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಎಲ್ಲ ರೀತಿಯ ಅಗತ್ಯ ಸಹಾಯ ಮತ್ತು ವಾರ್ಗದರ್ಶನ ನೀಡಲು ಅಕಾಡೆಮಿ ಸಿದ್ಧವಿದೆೆ ಎಂದು ಹೇಳಿದರು.

    ಜನಚೇತನ ಟ್ರಸ್ಟ್ ನ ಅಧ್ಯಕ್ಷ ಪ್ರಸನ್ನ ಕೆ.ಗೌಡ ವಾತನಾಡಿ, ಪ್ರತಿ ಮೂರು ತಿಂಗಳಿಗೆ ಒಮ್ಮೆ ನಾವು ಈ ರೀತಿಯ ಉಚಿತ ಕಾರ್ಯಗಾರ ಹಮ್ಮಿಕೊಳ್ಳುವ ಮೂಲಕ ಪ್ರತಿಭಾವಂತ ಮಕ್ಕಳಿಗೆ ಎಲ್ಲ ರೀತಿಯ ಅಗತ್ಯ ಸಹಾಯ ನೀಡಲು ಸಿದ್ಧರಿದ್ದೇವೆ ಎಂದರು.ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಆರ್ಗ್ಯಾನಿಕ್ ಮಂಡ್ಯ ಸಂಸ್ಥಾಪಕ ಎಸ್.ಸಿ.ಮಧುಚಂದನ್, ಅಕಾಡೆಮಿಯ ಸಂಪನ್ಮೂಲ ವ್ಯಕ್ತಿಗಳಾದ ಪ್ರಶಾಂತ್ ಶ್ರೀನಿವಾಸ್, ಸಾದತ್, ತಗ್ಗಳ್ಳಿ ಪ್ರಸನ್ನ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts