More

    ಉದ್ಯೋಗ ನೀಡುವ ಉದ್ಯಮಿಗಳಾಗಿ

    ಪಾಂಡವಪುರ: ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ಸವಲತ್ತುಗಳನ್ನು ಬಳಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಎಸ್‌ಟಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸಿಇಒ ಸಿ.ಪಿ.ಶಿವರಾಜು ಸಲಹೆ ನೀಡಿದರು.

    ತಾಲೂಕಿನ ಚಿನಕುರಳಿಯ ಎಸ್‌ಟಿಜಿ ಪ್ರಥಮ ದರ್ಜೆ ಕಾಲೇಜಿನ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಬಿ.ಎ, ಬಿಎಸ್ಸಿ, ಬಿಕಾಂ ಹಾಗೂ ಬಿಬಿಎ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪ್ರಸ್ತುತ ದೇಶಕ್ಕೆ ಉದ್ಯೋಗ ಪಡೆಯುವವರಿಗಿಂತ ಉದ್ಯೋಗ ಸೃಷ್ಟಿಸುವವರ ಅವಶ್ಯಕತೆ ಹೆಚ್ಚಿದೆ. ತಾವೆಲ್ಲರೂ ಕೌಶಲ ಬೆಳೆಸಿಕೊಂಡು ಉದ್ಯೋಗ ನೀಡುವ ಉದ್ಯಮಿಗಳಾಗಬೇಕೆಂದು ಕಿವಿಮಾತು ಹೇಳಿದರು.

    ಕಾಲೇಜಿನ ಆಡಳಿತಾಧಿಕಾರಿ ನಿವೇದಿತಾ ನಾಗೇಶ್ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉಪ ಪ್ರಾಂಶುಪಾಲರಾದ ಡಾ.ನಿಶಾಂತ್ ಎ.ನಾಯ್ಡು ಅವರು ಕಲಾ, ವಿಜ್ಞಾನ, ವಾಣಿಜ್ಯ ವಿಭಾಗ, ಐಕ್ಯೂಎಸಿ, ಕ್ರೀಡಾ, ಗ್ರಂಥಾಲಯ ವಿಭಾಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಉಪನ್ಯಾಸಕರಾದ ಪಲ್ಲವಿ, ರೇಖಾ, ಪುನೀತ್‌ಕುಮಾರ್, ಹರಿಣಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts