More

    ಉದ್ಯೋಗ ಮಾರ್ಗ ಅನ್ವೇಷಿಸುವುದು ಅಗತ್ಯ

    ಬೆಳಗಾವಿ: ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು ಕೇವಲ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗ ಕಂಡುಕೊಳ್ಳುವ ಬದಲು ಉದ್ಯಮಶೀಲತೆಯ ಅವಕಾಶಗಳನ್ನು ಅನ್ವೇಷಿಸುವ ಅಗತ್ಯವಿದೆ. ವಿದ್ಯಾರ್ಥಿಗಳು ಕೇವಲ ಪದವಿ ಪ್ರಮಾಣಪತ್ರಗಳನ್ನು ಪಡೆಯುವುದಕ್ಕಿಂತ ಹೆಚ್ಚಾಗಿ ತಮ್ಮ ಸಂವಹನ ಮತ್ತು ಪ್ರಸ್ತುತಿ ಕೌಶಲ ಬೆಳೆಸಿಕೊಳ್ಳಬೇಕು ಎಂದು ಪೈ ಬೇಕರಿ ಉತ್ಪನ್ನಗಳ ವ್ಯವಸ್ಥಾಪಕ ನಿರ್ದೇಶಕಿ, ಉದ್ಯಮಿ ಜ್ಯೋತ್ಸ್ನಾ ಪೈ ಹೇಳಿದರು.

    ನಗರದ ಅಂಗಡಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ ಎಂಬಿಎ ವಿಭಾಗವು ಪದವಿಪೂರ್ವ ವಿದ್ಯಾರ್ಥಿಗಳಿಗೆ ಈಚೆಗೆ ಆಯೋಜಿಸಿದ್ದ ‘ಎಐಟಿಎಂ ಎಂಬಿಎ ಫಿಯೆಸ್ಟಾ 2ಕೆ23’ ಎರಡು ದಿನಗಳ ರಾಷ್ಟ್ರಮಟ್ಟದ ಮ್ಯಾನೇಜ್‌ಮೆಂಟ್ ಫೆಸ್ಟ್ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲಗಳು ವಿದ್ಯಾರ್ಥಿಗಳಿಗೆ ಅಗತ್ಯವಾಗಿದ್ದು, ಉದ್ಯಮ ಸ್ಥಾಪಿಸುವುದಕ್ಕೆ ಸಹಕಾರಿಯಾಗುತ್ತವೆ ಎಂದರು.

    ಸುರೇಶ ಅಂಗಡಿ ಶಿಕ್ಷಣ ಪ್ರತಿಷ್ಠಾನದ ನಿರ್ದೇಶಕಿ ಡಾ.ಸ್ಫೂರ್ತಿ ಅಂಗಡಿ ಪಾಟೀಲ ಮಾತನಾಡಿ, ಎಸ್‌ಎಇಎಫ್‌ನ ಎಐಟಿಎಂ ಅತ್ಯುತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುತ್ತ ಗ್ರಾಮೀಣ ಯುವಕರಿಗೆ ವೃತ್ತಿ ಜೀವನ ರೂಪಿಸಿಕೊಳ್ಳುವುದಕ್ಕೆ ಅನುಕೂಲವಾಗುತ್ತಿದೆ. ವಿದ್ಯಾರ್ಥಿಗಳು ಇಂತಹ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳುವ ಅಗತ್ಯವಿದೆ ಎಂದರು.

    ವಿವಿಧ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎಂಬಿಎ ವಿಭಾಗದ ನಿರ್ದೇಶಕ ಡಾ. ಸೂರ್ಯಕುಮಾರ್ ಖಾನಾಯಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್‌ಎಇಎಫ್ ಆಡಳಿತಾಧಿಕಾರಿ ರಾಜು ಜೋಶಿ, ಎಐಟಿಎಂ ಪ್ರಾಚಾರ್ಯ, ನಿರ್ದೇಶಕ ಡಾ.ಆನಂದ ದೇಶಪಾಂಡೆ, ಎಲ್ಲ ವಿಭಾಗದ ಡೀನ್‌ಗಳು, ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು. ವಿದ್ಯಾರ್ಥಿಗಳಾದ ಪ್ರಸನ್ನ ಕಾನೇಕರ್ ಮತ್ತು ಚೇತನ ಗೌಡಪ್ಪಗೋಳ ನಿರೂಪಿಸಿದರು. ಇಸ್ರಾ ಸಹರ್ ಪರಿಚಯಿಸಿದರು. ನೀಲ್ ಡೊನೊಗ್ಯು ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts