More

    ಉನ್ನತ ಶಿಕ್ಷಣ ಪಡೆದು ಮುಂದೆ ಬನ್ನಿ

    ಯಾದಗಿರಿ: ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕು ಎಂಬುದು ಸರಕಾರದ ನೀತಿಯಾಗಿದ್ದು, ಈ ನಿಟ್ಟಿನಲ್ಲಿ ಸಕರ್ಾರಿ ಶಾಲಾ, ಕಾಲೇಜುಗಳಿಗೆ ಸಾಕಷ್ಟು ಸೌಲಭ್ಯ ಒದಗಿಸುತ್ತಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತಿಳಿಸಿದರು.

    ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಾಪಿಸಿದ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿ, ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾಥರ್ಿಗಳು ಉನ್ನತ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಸರಕಾರಿ ಕಾಲೇಜುಗಳಲ್ಲಿ ಎಲ್ಲ ರೀತಿಯ ಸೌಲಭ್ಯವನ್ನು ಸರಕಾರ ಒದಗಿಸುತ್ತಿದೆ. ಅದನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಮುಂದೆ ಬರುವಂತೆ ಸಲಹೆ ನೀಡಿದರು.


    ಸದೃಡವಾದ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಾಗೂ ರೋಗ ರುಜಿನಗಳಿಂದ ದೂರ ಇರಲು ಶುದ್ಧವಾದ ಕುಡಿಯುವ ನೀರು, ಒಳ್ಳೆಯ ಗಾಳಿ,ಬೆಳಕು ಹಾಗೂ ಉತ್ತಮ ಆಹಾರ ಪದ್ದತಿಯನ್ನು ವಿದ್ಯಾಥರ್ಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. 10 ಲಕ್ಷ ರೂ.ವೆಚ್ಛದಲ್ಲಿ ಆರ್ಓ ಪ್ಲಾಂಟ್ ಸ್ಥಾಪಿಸಲಾಗಿದ್ದು, ಇದನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕಾದ ಜವಾಬ್ದಾರಿ ಆಡಳಿತ ಮಂಡಳಿ ಮೇಲಿದೆ ಎಂದು ಸೂಚಿಸಿದರು.

    ನನ್ನ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಪ್ರಥಮ ಆಧ್ಯತೆ ಕೊಡುತಿದ್ದೇನೆ. ಅದಕ್ಕಾಗಿ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಪ್ರಾಂಶುಪಾಲರು ಮನವಿ ಸಲ್ಲಿಸಿದ ಒಂದು ತಿಂಗಳಲ್ಲಿ ಅದನ್ನು ಮಂಜೂರು ಮಾಡಿಸಲಾಗಿದೆ. ಮುಂಬರುವ ದಿನಗಳಲ್ಲಿ ಕಾಲೇಜಿನ ಆವರಣದಲ್ಲಿ ಹೈಮಾಸ್ಕ್ ದೀಪ, ಶೌಚಗೃಹ, ಹಾಗೂ ಪಿಠೋಪಕರಣಗಳ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts