More

    ಉರುಳುಗಲ್ಲು ಪ್ರಕರಣ: ಅರಣ್ಯಾಧಿಕಾರಿ ಮೇಲಿನ ಕೇಸ್ ಹಿಂಪಡೆಯಿರಿ

    ಸಾಗರ: ತಾಲೂಕಿನ ಕಾರ್ಗಲ್ ವನ್ಯಜೀವಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಉಪ ವಲಯ ಅರಣ್ಯಾಧಿಕಾರಿ ಪ್ರಮೋದ್ ಎಸ್. ಕುಂಬಾರ್ ಅವರ ಮೇಲೆ ದಾಖಲಿಸಿರುವ ಪ್ರಕರಣವನ್ನು ಹಿಂದಕ್ಕೆ ಪಡೆಯಬೇಕು ಮತ್ತು ಅವರನ್ನು ಅದೇ ವಲಯದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿ ಸೋಮವಾರ ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳು ಮತ್ತು ಮೋಜಿಣಿದಾರರ ಸಂಘದ ಪದಾಧಿಕಾರಿಗಳು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
    ಸಂಘದ ಅಧ್ಯಕ್ಷ ಎನ್.ಸಂತೋಷ್ ಕುಮಾರ್ ಮಾತನಾಡಿ, ಕಾರ್ಗಲ್ ವನ್ಯಜೀವಿ ವಿಭಾಗದ ಉರುಳುಗಲ್ಲು ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಮೋದ್ ಎಸ್.ಕುಂಬಾರ್ ರಾತ್ರೋರಾತ್ರಿ ವನ್ಯಜೀವಿ ಪ್ರದೇಶದಲ್ಲಿ ಅಕ್ರಮವಾಗಿ 33 ಮರ ಕಡಿದವರ ಮೇಲೆ ಕೇಸ್ ದಾಖಲಿಸಿದ್ದಾರೆ. ಓರ್ವ ಅರಣ್ಯಾಧಿಕಾರಿಯಾಗಿ ಪ್ರಮೋದ್ ಅರಣ್ಯ ಉಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಕ್ರಮ ತೆಗೆದುಕೊಂಡಿದ್ದಾರೆ. ಕಾನೂನಿನ ಪ್ರಕಾರ ನಡೆದುಕೊಂಡ ಪ್ರಮೋದ್ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ, ವೈಯಕ್ತಿಕ ದ್ವೇಷದಿಂದ ಅವರ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನವನ್ನು ಕೆಲವರು ನಡೆಸುತ್ತಿದ್ದಾರೆ ಎಂದು ದೂರಿದರು.
    ಕೂಡಲೆ ಪ್ರಮೋದ್ ಅವರ ಮೇಲೆ ವಿಚಾರಣೆ ನಡೆಸಲು ನೀಡಿರುವ ಆದೇಶ ತಕ್ಷಣ ಹಿಂದಕ್ಕೆ ಪಡೆದು, ವರ್ಗಾವಣೆ ರದ್ದುಗೊಳಿಸಬೇಕು. ಈ ಬಗ್ಗೆ ಆ.10ರಂದು ಶಿವಮೊಗ್ಗ ಅರಣ್ಯಾಧಿಕಾರಿಗಳ ಕಚೇರಿಗೆ ನ್ಯಾಯಕ್ಕಾಗಿ ಮನವಿ ಸಲ್ಲಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆ ನೌಕರರ ಮೇಲೆ ಅನಗತ್ಯ ಆರೋಪ ಹೊರಿಸಿ ಅವರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ, ಅಧಿಕಾರಿ ಮತ್ತು ನೌಕರರು ಸಾಮೂಹಿಕ ರಜೆ ಹಾಕಿ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts