More

    ಊಹಾಪೋಹಗಳಿಗೆ ಕಿವಿಗೊಡಬೇಡಿ

    ಯಲ್ಲಾಪುರ: ಜನತೆ ಯಾವುದೇ ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಕಾರ್ವಿುಕ ಹಾಗೂ ಸಕ್ಕರೆ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

    ಅವರು ಶನಿವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

    ಕರೊನಾ ವೈರಸ್ ಹರಡದಂತೆ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ. ತಾಲೂಕಾಡಳಿತ ಹಾಗೂ ಇತರ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿವೆ ಎಂದ ಅವರು, ತಾಲೂಕಿನಲ್ಲಿ ರೋಗ ಪತ್ತೆಗೆ ಒಂದೇ ಥಮೋ ಸ್ಕಾ್ಯನರ್ ಇರುತ್ತಿದ್ದು, ಇನ್ನು ನಾಲ್ಕೈದಾದರೂ ಪೂರೈಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸೂಚಿಸಿದರು.

    ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂಗೆ ಕರೆ ನೀಡಿದಂತೆ ಜನರು ಕಟ್ಟು ನಿಟ್ಟಾಗಿ ಪಾಲಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಕೆಲವರು ಊಹಾಪೋಹಗಳನ್ನು ಹಬ್ಬಿಸುತ್ತಿದ್ದು, ಅಂತಹ ಯಾವುದೇ ವದಂತಿಗಳಿಗೆ ಭಯಪಡಬೇಡಿ ಎಂದರು. ತಾಲೂಕು ಆರೋಗ್ಯಾಧಿಕಾರಿ ಡಾ. ನರೇಂದ್ರ ಪವಾರ್, ತಹಸೀಲ್ದಾರ್ ಡಿ.ಜಿ .ಹೆಗಡೆ, ಸಿಪಿಐ ಸುರೇಶ ಯೆಳ್ಳೂರು, ತಾ.ಪಂ. ಇಒ ಜಗದೀಶ್ ಕಮ್ಮಾರ್, ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ. ಭಟ್ಟ, ಜಿ.ಪಂ. ಮಾಜಿ ಸದಸ್ಯ ವಿಜಯ ಮಿರಾಶಿ ಇತರರಿದ್ದರು.

    ವದಂತಿಯಿಂದ ಫಜೀತಿ: ಪಟ್ಟಣದ ಕಾಳಮ್ಮನಗರದ ವ್ಯಕ್ತಿಯೊಬ್ಬನಿಗೆ ಕರೊನಾ ವೈರಸ್ ಇರುವುದು ಖಚಿತವಾಗಿದೆ ಎಂಬ ವದಂತಿ ಶನಿವಾರ ಪಟ್ಟಣದ ತುಂಬೆಲ್ಲ ಹಬ್ಬಿ ಆತಂಕದ ವಾತಾವರಣ ಸೃಷ್ಟಿಯಾಯಿತು. ನಂತರ ಆರೋಗ್ಯ ಇಲಾಖೆಯ ಅಧಿಕಾರಿಗಳು ಆ ವ್ಯಕ್ತಿಯ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದರು. ಅವರಿಗೆ ವೈರಸ್​ನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂಬುದನ್ನು ಅಧಿಕಾರಿಗಳು ಖಚಿತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts