More

    ಎಚ್ಐವಿ ಬಗ್ಗೆ ನಿರ್ಲಕ್ಷೃ ಸಲ್ಲದು


    ಯಾದಗಿರಿ: ಎಚ್ಐವಿ ಸೋಂಕಿನ ಬಗ್ಗೆ ಅಲಕ್ಷೃ ಮಾಡದೆ, ಬರದಂತೆ ತಡೆಯಲು ಜಾಗೃತಿ ಹೆಚ್ಚಿಸಿ, ನಿಮರ್ೂಲನೆ ಮಾಡುವುದು ಎಲ್ಲರ ಹೊಣೆಯಾಗಿದೆ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರು ಹೇಳಿದರು.

    ಶುಕ್ರವಾರ ನಗರದ ಹೊರ ವಲಯದಲ್ಲಿನ ಯಿಮ್ಸ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಎಚ್ಐವಿ ಅಥವಾ ಏಡ್ಸ್ ವಿರುದ್ಧದ ಹೋರಾಟದಲ್ಲಿ ವಿಶ್ವವು ಸಾಧಿಸಿದ ಪ್ರಗತಿಯನ್ನು ಬಿಂಬಿಸಲು ಈ ದಿನ ಆಚರಿಸಲಾಗುತ್ತಿದೆ. ಸೊಂಕಿನ ಪ್ರಮಾಣ ಕಡಿಮೆ ಮಾಡಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ತಿಳಿಸಿದರು.

    ಆರೋಗ್ಯ ಇಲಾಖೆ ಅಧಿಕಾರಿಗಳು ಸಕರ್ಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆಯಾಗದಂತೆ ನೋಡಿಕೊಳ್ಳಬೇಕು. ರೋಗಿಗಳಿಗೆ ಹೊರಗಿನಿಂದ ಔಷಧಿ ತರಲು ಹೇಳಬಾರದು. ಡಯಾಲಿಸಿಸ್ ಚಿಕಿತ್ಸೆಯನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದ್ದು, ಆಸ್ಪತ್ರೆಯಲ್ಲಿ ರಕ್ತನಿಧಿ ಸ್ಥಾಪಿಸಬೇಕು ಎಂದು ಸೂಚಿಸಿದರು.

    ಜಿಲ್ಲಾ ಆರೋಗ್ಯಾಧಿಕಾರಿ ಡಾ.ಪ್ರಭುಲಿಂಗ ಮಾನಕರ ಮಾತನಾಡಿ, ಸಮುದಾಯಗಳು ಮುನ್ನಡೆಸಲಿ ಎಂಬುದು ಈ ವರ್ಷದ ಘೋಷವಾಕ್ಯ. ವಿಧ್ಯಾಥರ್ಿಗಳು ಎಚ್ಐವಿ ರೋಗದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕು ಎಂದು ಸಲಹೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts