More

    ಎತ್ತಿನಹೊಳೆ ಯೋಜನೆ ಶೀಘ್ರ ಆರಂಭ

    ಬೆಳಗಾವಿ: ಭೂ ಸ್ವಾಧೀನ ಹಾಗೂ ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿರುವ ಎತ್ತಿನಹೊಳೆ ಯೋಜನೆಯ ಮೊದಲ ಹಂತವನ್ನು ನಿಗದಿತ ಸಮಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಬೃಹತ್ ನೀರಾವರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆ ಮೊದಲ ಹಂತದ ಕಾಮಗಾರಿಗೆ ಹಾಸನ ಜಿಲ್ಲೆಯಲ್ಲಿ ಭೂ ಸ್ವಾಧೀನ ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದ್ದೇನೆ ಎಂದರು.

    ಕಳಸಾ-ಬಂಡೂರಿ ನಾಲಾ ಯೋಜನೆಯಡಿ ನಮ್ಮ ಪಾಲಿನ ನೀರು ಬಳಕೆಗೆ ಯಾವುದೇ ಸಮಸ್ಯೆ ಇಲ್ಲ. ಅಲ್ಲದೆ, ನಮ್ಮ ಸರ್ಕಾರದಲ್ಲಿ ಯಾವುದೇ ರೀತಿಯ ಮಾಫಿಯಾಗಳಿಗೆ ಅವಕಾಶವಿಲ್ಲ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖವಾತ ಜತೆಗೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಚರ್ಚಿಸಲಾಗಿದೆ. ಅದೇ ರೀತಿ ಕಾನೂನು ತಜ್ಞರ ಜತೆಗಿನ ಸಭೆಯಲ್ಲಿ ಅಂತಾರಾಜ್ಯ ಜಲವಿವಾದಗಳಲ್ಲಿ ನಮ್ಮ ಪರವಾಗಿ ತೀರ್ಪು ಬರುವಂತೆ ಅಗತ್ಯ ಕ್ರಮವಹಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಜಲವಿವಾದಗಳು ಶೀಘ್ರ ಬಗೆಹರಿಯಲಿವೆ ಎಂದರು.

    ಬೆಂಗಳೂರು ಅಭಿವೃದ್ಧಿ ಮಾದರಿಯಲ್ಲಿಯೇ ಬೆಳಗಾವಿ ನಗರದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಅಲ್ಲದೆ, ರಾಜ್ಯಮಟ್ಟದ ವಿವಿಧ ಇಲಾಖೆಗಳನ್ನು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಿಸುವ ಕುರಿತು ಸಿಎಂ ಚಿಂತನೆ ನಡೆಸಿದ್ದಾರೆ. ಬೆಳಗಾವಿಗೆ 2ನೇ ರಾಜಧಾನಿ ಸ್ಥಾನಮಾನ ನೀಡುವ ಜತೆಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು. ಬೆಳಗಾವಿ, ಹುಬ್ಬಳಿ-ಧಾರವಾಡ ಹಾಗೂ ಕಲಬರ್ಗಿ ಮಹಾನಗರ ಪಾಲಿಕೆಗಳಲ್ಲಿ ಬಿಜೆಪಿ ಅಧಿಕಾರ ವಹಿಸಲಿದ್ದು, ಜನರಿಗೆ ನೀಡಿರುವ ಭರವಸೆ
    ಈಡೇರಿಸಲಾಗುವುದು ಎಂದರು.

    ಸಂಸದೆ ಮಂಗಲ ಅಂಗಡಿ, ಶಾಸಕ ಅಭಯ ಪಾಟೀಲ, ನಗರ ಬಿಜೆಪಿ ಜಿಲ್ಲಾಧ್ಯಕ್ಷ ಶಶಿಕಾಂತ ಪಾಟೀಲ, ಉಸ್ತುವಾರಿ ರಮೇಶ ದೇಶಪಾಂಡೆ, ರಾಜ್ಯ ಬಿಜೆಪಿ ವಕ್ತಾರ ಎಂ.ಬಿ. ಝಿರಲಿ, ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ ಉಪಸ್ಥಿತರಿದ್ದರು.

    ನಗರದಲ್ಲಿ ುಡ್‌ಪಾರ್ಕ್ ನಿರ್ಮಾಣ

    ಬೆಳಗಾವಿ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ 16 ತಳಿಯ ಮಾವು ಬೆಳೆಯಲಾಗುತ್ತಿದೆ. ವಿವಿಧ ತಳಿಯ ಹಣ್ಣುಗಳನ್ನೂ ಸಹ ಬೆಳೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ‘ಫುಡ್‌ಪಾರ್ಕ್’ ಅವಶ್ಯವಿದೆ. ಶಾಸಕರು, ಪಾಲಿಕೆ ಸದಸ್ಯರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಅನುಮೋದನೆ ಕೊಡಿಸುವುದು ನಮ್ಮ ಜವಾಬ್ದಾರಿ ಎಂದು ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts