More

    ಎನ್‌ಇಪಿಯಿಂದ ಎಲ್ಲರಿಗೂ ಉತ್ತಮ ಶಿಕ್ಷಣ

    ಹುಕ್ಕೇರಿ: ಶಿಕ್ಷಣದಲ್ಲಿ ಈ ಹಿಂದಿದ್ದ ಪಠ್ಯದಲ್ಲಿ ಹಲವು ಬದಲಾವಣೆ ಮಾಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೂತನ ಶಿಕ್ಷಣ ನೀತಿ (ಎನ್‌ಇಪಿ) ಜಾರಿ ಮಾಡಿದ್ದರಿಂದ ಎಲ್ಲ ವರ್ಗದ ಜನರಿಗೂ ಉತ್ತಮ ಶಿಕ್ಷಣ ದೊರೆಯಲಿದೆ ಎಂದು ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕ್ ಅಧ್ಯಕ್ಷ ಪವನ ರಮೇಶ ಕತ್ತಿ ಹೇಳಿದರು.

    ಪಟ್ಟಣದ ವಿಶ್ವರಾಜ ಸಭಾಭವನದಲ್ಲಿ ಶಿಕ್ಷಣ ಇಲಾಖೆಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 134ನೇ ಜಯಂತಿ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
    ಅಭಿವೃದ್ಧಿ ದೇಶವೆಂದು ಪರಿಗಣಿಸಲು ಆ ದೇಶದ ಶಿಕ್ಷಣ ಪಾತ್ರ ಪ್ರಮುಖವಾದದ್ದು. ಅಂತಹ ಶಿಕ್ಷಣ ನೀಡುವ ಶಿಕ್ಷಕರನ್ನು ಗೌರವಿಸಬೇಕಾದದ್ದು ನಮ್ಮ ಕರ್ತವ್ಯ ಎಂದರು.

    ನಿವೃತ್ತ ಶಿಕ್ಷಕರು ಹಾಗೂ ಅತ್ಯುತ್ತಮ ಶಿಕ್ಷಕರನ್ನು ಸತ್ಕರಿಸಲಾಯಿತು. ಹಿರೇಮಠದ ಚಂದ್ರಶೇಖರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ತಹಸೀಲ್ದಾರ್ ಡಾ. ಡಿ.ಎಚ್.ಹೂಗಾರ, ತಾಪಂ ಇಒ ಉಮೇಶ ಸಿದ್ನಾಳ ಮಾತನಾಡಿದರು. ಪುರಸಭೆ ಅಧ್ಯಕ್ಷ ಎ.ಕೆ.ಪಾಟೀಲ, ಹಿರಾ ಶುಗರ್ಸ್‌ ನಿರ್ದೇಶಕ ಅಶೋಕ ಪಟ್ಟಣಶೆಟ್ಟಿ, ಬಿಇಒ ಮೋಹನ ದಂಡಿನ, ಎಂ.ಎಸ್.ಪಟಗುಂದಿ, ತಾತ್ಯಾಸಾಹೇಬ ನಾಂದನಿ, ಬಿಸಿಯೂಟ ಸಹಾಯಕ ನಿರ್ದೇಶಕಿ ಸವಿತಾ ಹಲಕಿ, ಅವಿನಾಶ ಹೊಳೆಪ್ಪಗೋಳ, ಶಿವಾನಂದ ಗುಂಡಾಳೆ, ಶಿವಾನಂದ ಪಾಟೀಲ, ಎ.ಎಸ್.ಪದ್ಮನ್ನವರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts