More

    ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ ಪಡೆಯಲಿ

    ಜೇವರ್ಗಿ: ಎಪಿಎಂಸಿ ಮಾರುಕಟ್ಟೆಗಳನ್ನು ನಂಬಿ ಬದುಕು ಕಟ್ಟಿಕೊಂಡಿರುವ ಲಕ್ಷಾಂತರ ಹಮಾಲಿ ಕಾರ್ಮಿಕರ ಉದ್ಯೋಗ ಕಸಿದುಕೊಳ್ಳುವ ಹಾಗೂ ಸೌಲಭ್ಯಗಳಿಂದ ವಂಚಿಸಲಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ಹಮಾಲಿ ಕಾರ್ಮಿಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಯಿತು.
    ಲಾಕ್ಡೌನ್ನಿಂದಾಗಿ ಉದ್ಯೋಗ ಕಳೆದುಕೊಂಡ ಹಮಾಲಿ ಕಾರ್ಮಿಕರಿಗೆ ಮಾಸಿಕ 7500 ರೂ. ಆರ್ಥಿಕ ನೆರವು ನೀಡಬೇಕು. ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಎಲ್ಲ ನಗರ ಗ್ರಾಮೀಣ ಬಜಾರ್ ಹಮಾಲಿ ಕಾರ್ಮಿಕರಿಗೆ ಭವಿಷ್ಯನಿಧಿ ಯೋಜನೆ ಪಿಂಚಣಿ ಜಾರಿ ಮಾಡಬೇಕು. ನನೆಗುದಿಗೆ ಬಿದ್ದಿರುವ ವಸತಿ ಯೋಜನೆ ಅಡಿ ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ಜಾರಿ ಮಾಡಬೇಕು. ಹಮಾಲಿ ಕಾರ್ಮಿಕರಿಗೆ ಇಎಸ್ಐ, ಪಿಎಫ್ ಹಾಗೂ ಕನಿಷ್ಠ ವೇತನ, ಬೋನಸ್ ಜಾರಿಗೊಳಿಸಬೇಕು. ಉದ್ಯೋಗ ಖಾತರಿ ಯೋಜನೆ, ಕೂಲಿ 600 ರೂ.ಕೆ್ಕೆ ಹೆಚ್ಚಿಸಿ 200 ದಿನಗಳ ಕೆಲಸ ನೀಡಬೇಕು ಎಂದು ಸೇರಿ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಹಸೀಲ್ದಾರ್ ಸಿದ್ದರಾಯ ಬೋಸಗಿ ಅವರಿಗೆ ಮನವಿ ಸಲ್ಲಿಸಲಾಯಿತು.
    ಸಂಘದ ಅಧ್ಯಕ್ಷ ಬಸವರಾಜ ಕೆಲ್ಲೂರ, ಸುಭಾಷ ಹೊಸಮನಿ, ಲಕ್ಕಪ್ಪ ರೆದ್ದೇವಾಡಗಿ, ಮೌನೇಶ ಹನ್ನೂರ, ಸೈಯದ, ರಾಮಲಿಂಗ, ಸುಲೇಮಾನ, ಈರಪ್ಪ, ನಿಂಗಣ್ಣ ಠಣಕೇದಾರ, ಶಿವಕುಮಾರ ಗಬಸಾವಳಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts