More

    ಎಲೆಚುಕ್ಕೆ ರೋಗ ನಿವಾರಣೆಗೆ ಪೂಜೆ

    ಕಳಸ: ತಾಲೂಕಿನ ಅಡಕೆ ಕೃಷಿಕರನ್ನು ಎಲೆಚುಕ್ಕೆ ರೋಗ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಹೊರನಾಡಿನ ಅನ್ನಪೂರ್ಣೆಶ್ವರಿ ಸನ್ನಿಧಿಯಲ್ಲಿ ಕೃಷಿಕರ ಪರವಾಗಿ ಪೂಜೆ, ಪಾರಾಯಣ, ಹೋಮ ನಡೆಸಲಾಗಿದೆ ಎಂದು ದೇವಸ್ಥಾನದ ಧರ್ಮಕರ್ತ ಜಿ.ಭೀಮೇಶ್ವರ ಜೋಷಿ ತಿಳಿಸಿದ್ದಾರೆ. ಕೃಷಿಕರು ದೇವಸ್ಥಾನಕ್ಕೆ ಬಂದು ದೇವಿಯ ದರ್ಶನ ಪಡೆದು ಶ್ರೀಮುಡಿ ಗಂಧಪ್ರಸಾದ ಸ್ವೀಕರಿಸಿ ಜಮೀನಿಗೆ ಸಿಂಪಡಿಸಬೇಕು. ಈ ಹಿಂದೆಯೂ ಜಗನ್ಮಾತೆ ಭಂಡಾರದ ಪ್ರಸಾದವನ್ನು ಕೃಷಿ ಭೂಮಿಗೆ ಹಾಕಿದ್ದರ ಪರಿಣಾಮ ಅನೇಕ ಸಮಸ್ಯೆಗಳು ಪರಿಹಾರವಾಗಿವೆ. ಅನ್ನಪೂರ್ಣೆಯ ಅನುಗ್ರಹದಿಂದ ಕೃಷಿ ಸಮಸ್ಯೆ ಪರಿಹಾರವಾಗುವ ಭರವಸೆ ಇದೆ ಎಂದು ಹೇಳಿದ್ದಾರೆ.

    ರೋಗದ ವೈಜ್ಞಾನಿಕ ವಿಶ್ಲೇಷಣೆ ಮಾಡಬೇಕು ಮತ್ತು ನಿವಾರಣೋಪಾಯಗಳನ್ನು ಕಂಡುಹಿಡಿಯಬೇಕು ಎಂದು ಮುಖ್ಯಮಂತ್ರಿ, ಕೃಷಿ ಸಚಿವ ಮತ್ತು ಶಾಸಕರಲ್ಲಿ ಮನವಿ ಮಾಡಲಾಗಿದೆ. ಎಲ್ಲ ಕೃಷಿಕರೂ ಧೈರ್ಯದಿಂದ, ಸಾಮೂಹಿಕವಾಗಿ ಪರಿಹಾರ ಕಂಡುಕೊಳ್ಳಬೇಕಾಗಿದೆ. ಯಾವ ಕೃಷಿಕರೂ ಆತ್ಮಹತ್ಯೆಯಂತಹ ದುಡುಕಿನ ತೀರ್ಮಾನ ತೆಗೆದುಕೊಳ್ಳಬಾರದು ಎಂದು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts