More

    ಎಲ್ಲರೂ ಒಗ್ಗೂಡಿ ಅಭ್ಯರ್ಥಿಗಳನ್ನು ಗೆಲ್ಲಿಸಿ

    ನಿಪ್ಪಾಣಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅಪೇಕ್ಷೆಯಂತೆ ದೇಶದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದು, ಕಾರ್ಯಕರ್ತರೆಲ್ಲರೂ ಒಗ್ಗೂಡಿ ಜಿಲ್ಲೆಯಲ್ಲಿ ಪಕ್ಷದ ಎಲ್ಲ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.

    ನಗರದ ಜತ್ರಾಟವೇಸ್‌ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಹಾರ ಹಾಕಿ ವಿಜಯ ಸಂಕಲ್ಪ ಯಾತ್ರೆಗೆ ಬುಧವಾರ ಚಾಲನೆ ನೀಡಿ ಮಾತನಾಡಿದರು. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಾರ್ಥಕತೆ ಬಿಜೆಪಿಯಲ್ಲಿದೆ. ಮಹಿಳೆಯರಿಗೆ ಸ್ಥಾನಮಾನ ನೀಡಿ ಮುಂಚೂಣಿಗೆ ತರುವ ಪಕ್ಷ ಇದಾಗಿದೆ. 140ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಅದರಲ್ಲಿ ನನ್ನ ಕ್ಷೇತ್ರವೇ ನಂಬರ್ ಒನ್ ಆಗಿರುತ್ತದೆ. ಮತ್ತೊಮ್ಮೆ ನಿಮ್ಮ ಪ್ರತಿನಿಧಿಯಾಗುವ ಅವಕಾಶ ನೀಡಿ ಎಂದು ಮನವಿ ಮಾಡಿದರು.

    ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮಾತನಾಡಿ, ಕಾಂಗ್ರೆಸ್ ಪಕ್ಷ ಸಂಪೂರ್ಣ ನೆಲಕಚ್ಚಿದೆ. ಸುಳ್ಳು ಆರೋಪಗಳಿಗೆ ಜನ ಕಿಮ್ಮತ್ತು ಕೊಡುವುದಿಲ್ಲ ಎಂದರು. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿ, ಶಶಿಕಲಾ ಜೊಲ್ಲೆ ಅವರನ್ನು ವಿಧಾನಸಭೆಗೆ ಕಳುಹಿಸುವುದೇ ಇಂದಿನ ನಮ್ಮ ಸಂಕಲ್ಪ. ಅವರು ಮೂರನೇ ಬಾರಿಯೂ ಸಚಿವೆ ಆಗುವುದು ಕಟ್ಟಿಟ್ಟ ಬುತ್ತಿ ಎಂದರು. ಸಂಸದ ಅಣ್ಣಾಸಾಹೇಬ ಜೊಲ್ಲೆ ಬಸವೇಶ್ವರ ಮಹಾತ್ಮ ಪ್ರತಿಮೆಗೆ ಮಾಲಾರ್ಪಣೆಗೈದರು. ದಲಿತ ಸಾಮಾಜಿಕ ಕಾರ್ಯಕರ್ತ ಅವಿನಾಶ ಮಾನೆ ಮನೆಯಲ್ಲಿ ಮಧ್ಯಾಹ್ನ ಭೋಜನ ಸವಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಉಜ್ವಲಾ ಬಡವನಾಚೆ, ಶಶಿಕಾಂತ ನಾಯಿಕ, ಅರುಣ ಶಹಾಪುರ, ಸ್ಥಳೀಯ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಯಾಧ್ಯಕ್ಷ ಚಂದ್ರಕಾಂತ ಕೋಠಿವಾಲೆ, ಉಪಾಧ್ಯಕ್ಷ ಮಲಗೊಂಡ ಪಾಟೀಲ, ಸಂಚಾಲಕ ಆರ್.ವೈ. ಪಾಟೀಲ, ನಗರಸಭೆ ಅಧ್ಯಕ್ಷ ಜಯವಂತ ಭಾಟಲೆ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts