More

    ಎಲ್ಲೆಂದರಲ್ಲಿ ತರಕಾರಿ ವ್ಯಾಪಾರಕ್ಕೆ ಕಡಿವಾಣ

    ಶಿಗ್ಗಾಂವಿ: ಪಟ್ಟಣದ ಎಲ್ಲೆಂದರಲ್ಲಿ ನಡೆಯುತ್ತಿದ್ದ ವ್ಯಾಪಾರಕ್ಕೆ ಪುರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಡಿವಾಣ ಹಾಕಿದೆ.

    ಅನಧಿಕೃತ ಅಂಗಡಿ, ತರಕಾರಿ ಮಂಡಿಗಳನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿಗಳು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ನಿಯಮ ಉಲ್ಲಂಘಿಸಿದರೆ ಅಂಗಡಿ ಮಾಲೀಕರನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಅನವಶ್ಯಕವಾಗಿ ಸುತ್ತಾಡುತ್ತಿದ್ದ ಸಾರ್ವಜನಿಕರ ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದು, ದಂಡದ ಜತೆಗೆ ಲಾಟಿ ರುಚಿ ತೋರಿಸುತ್ತಿರುವುದು ಶನಿವಾರ ಕಂಡುಬಂತು.

    ಪಟ್ಟಣದಲ್ಲಿ ವಾರದ ಸಂತೆ ರದ್ದಾಗಿದ್ದರೂ ತರಕಾರಿ ಮಾರಾಟ, ಖರೀದಿ ಜೋರಾಗಿಯೇ ನಡೆದಿತ್ತು. ಸಾರ್ವಜನಿಕರು ಖರೀದಿ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಕುರಿತು ಏ. 2ರಂದು ವಿಜಯವಾಣಿ ‘ತರಕಾರಿ ಖರೀದಿಗೆ ಮುಗಿಬಿದ್ದ ಜನತೆ’ ಶೀರ್ಷಿಕೆಯಡಿ ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts