More

    ಎಲ್ಲೆ ಮೀರಿದ ಗಣಿಗಾರಿಕೆ : ಅಕ್ರಮ ಪತ್ತೆಹಚ್ಚಿ ಪ್ರಕರಣ ದಾಖಲಿಸಲು ಡಿಸಿಎಂ ಅಶ್ವತ್ಥನಾರಾಯಣ ಸೂಚನೆ

    ರಾಮನಗರ : ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ, ಕೂಡಲೇ ಅಕ್ರಮ ಪತ್ತೆ ಹಚ್ಚಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ ಅಧಿಕಾರಿಗಳಿಗೆ ಸೂಚಿಸಿದರು.
    ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ವ್ಯವಸ್ಥೆ ಬದುಕಿದೆ ಎನ್ನುವುದನ್ನು ತಿಳಿಸಿಕೊಡಬೇಕಿದೆ. ಪ್ರಾಣಿ – ಪಕ್ಷಿಗಳು ಬದುಕಬೇಕು, ಪರಿಸರ ಉಳಿಯಬೇಕು. ಆದರೆ, ಜಿಲ್ಲೆಯಲ್ಲಿ ಎಲ್ಲೆ ಮೀರಿದ ಗಣಿಗಾರಿಕೆ ನಡೆಯುತ್ತಿದೆ ಎನ್ನುವ ದೂರುಗಳಿದ್ದು, ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಏನೂ ಉಳಿಯುವುದಿಲ್ಲ ಎಂದು ಎಚ್ಚರಿಸಿದರು.
    ಒಂದೇ ಪರ್ಮಿಟ್ – ಹಲವಾರು ಲಾರಿ: ಜಿಲ್ಲೆಯಲ್ಲಿ ಗಣಿಗಾರಿಕೆ ಮೇರೆ ಮೀರಿದೆ ಎಂದು ಗೃಹ ಸಚಿವರು ವಿಧಾನಸಭೆಯಲ್ಲಿಯೇ ಒಪ್ಪಿಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಏನೂ ನಡೆದೇ ಇಲ್ಲ ಎನ್ನುವಂತೆ ಇದ್ದಾರೆ. ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಒಂದೇ ಪರ್ಮಿಟ್‌ನಲ್ಲಿ ಹಲವಾರು ಲಾರಿಗಳು ಓಡಾಡುತ್ತಿವೆ. ಇವುಗಳನ್ನು ನಿಯಂತ್ರಿಸುವಲ್ಲಿ ಅಧಿಕಾರಿಗಳು ಸಂಫೂರ್ಣ ವಿಫಲರಾಗಿದ್ದಾರೆ ಎಂದು ಶಾಸಕ ಎ.ಮಂಜುನಾಥ್ ಆರೋಪಿಸಿದರು.

    ಡ್ರೋನ್ ಸರ್ವೇ ಮಾಡಿಸಿ
    ಅರಣ್ಯ ವ್ಯಾಪ್ತಿಯಲ್ಲಿ ಎಷ್ಟು ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಅಧಿಕಾರಿಗಳನ್ನು ಡಿಸಿಎಂ ಪ್ರಶ್ನಿಸಿದರು. ಆದರೆ ಯಾವುದೇ ಅಕ್ರಮ ಗಣಿಗಾರಿಕೆ ನಡೆಯುತ್ತಿಲ್ಲ ಎನ್ನುವ ಉತ್ತರದಿಂದ ಆಕ್ರೋಶಗೊಂಡರು. ಎಲ್ಲೆಲ್ಲಿ ಅಕ್ರಮ ನಡೆಯುತ್ತಿದೆ ಎಂದು ಹೆಲಿಕಾಪ್ಟರ್‌ನಲ್ಲಿ ಕರೆದುಕೊಂಡು ಹೋಗಿ ತೋರಿಸುತ್ತೇನೆ. ಪ್ರಕೃತಿಯನ್ನು ಕಾಪಾಡುವ ನಿಟ್ಟಿನಲ್ಲಿ ಈ ರೀತಿ ಉದಾಸೀನ ಬೇಡ, ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯದಂತೆ ಎಚ್ಚರ ವಹಿಸಬೇಕು. ಅಲ್ಲದೆ, ಕೂಡಲೇ ಡ್ರೋನ್ ಸರ್ವೇ ಮಾಡಿಸಿ ಅಕ್ರಮ ಗಣಿಗಾರಿಕೆ ನಡೆದಿರುವ ಸ್ಥಳ ಗುರುತಿಸಿ ಎಷ್ಟು ಪ್ರಮಾಣದ ಅಕ್ರಮ ನಡೆದಿದೆ ಎಂದು ಸಮೀಕ್ಷೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು ಮಾಡಿ ಎಂದು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

    ಖಾಸಗಿ ಆಸ್ಪತ್ರೆ ಬಳಸಿ
    ಜಿಲ್ಲೆಯಲ್ಲಿ ಸುಮಾರು 200 ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, 85 ಮಕ್ಕಳಿಗೆ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 35 ಮಕ್ಕಳನ್ನು ದಾಖಲು ಮಾಡಿಕೊಳ್ಳಲು ಅವಕಾಶವಿದ್ದು ಹಂತ ಹಂತವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರ್‌ಸಿಎಚ್ ಅಧಿಕಾರಿ ಡಾ. ಪದ್ಮ ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಖಾಸಗಿ ಆಸ್ಪತ್ರೆಗಳಾದ ರಾಜರಾಜೇಶ್ವರಿ ಮತ್ತು ದಯಾನಂದ ಸಾಗರ ಆಸ್ಪತ್ರೆಗಳನ್ನು ಬಳಕೆ ಮಾಡಿಕೊಳ್ಳುವಂತೆ ಎಂದು ಸೂಚಿಸಿದರು. ಅಲ್ಲದೆ, ಜಿಲ್ಲೆಯ ಚನ್ನಪಟ್ಟಣ, ಮಾಗಡಿ ಮತ್ತು ಕನಕಪುರದಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

    ಸ್ಪಷ್ಟ ಮಾಹಿತಿ ನೀಡಿದ ಗಣಿ ಇಲಾಖೆ ಅಧಿಕಾರಿ

    ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಸುಮಿತ್ರಾ ಸಭೆಗೆ ಸರಿಯಾದ ಮಾಹಿತಿ ನೀಡದೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮಾತಿನ ಚಾಟಿಗೆ ಕಂಗಾಲಾದ ಪ್ರಸಂಗ ಜರುಗಿತು. ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಂಡ ಕಾರ್ಯಗಳ ಬಗ್ಗೆ ಅಸ್ಪಷ್ಟ ಮಾಹಿತಿ ನೀಡಿದರು. ಈ ವೇಳೆ ಡಿಸಿಎಂ, ಶಾಸಕ ಎ.ಮಂಜುನಾಥ್, ಡಿಸಿ, ಸಿಇಒ ಹೀಗೆ ಯಾರು ಏನೇ ಕೇಳಿದರೂ ಯಾವುದಕ್ಕೂ ಸ್ಪಷ್ಟ ಉತ್ತರ ನೀಡಲಿಲ್ಲ. ಅಕ್ರಮ ಎಸಗಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಬರೋಲ್ಲ ಎನ್ನುವ ಉತ್ತರ ನೀಡಿದ್ದರಿಂದ ಆಕ್ರೋಶಗೊಂಡ ಡಿಸಿಎಂ, ಹಾಗಾದರೆ ನಿಮ್ಮ ಹೇಳಿಕೆಯನ್ನು ರೆಕಾರ್ಡ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
    ವಸತಿ ಕಾಲೇಜು – ಮಾಹಿತಿ ಇಲ್ಲ

    ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಸುಮಿತ್ರಾ ಸಭೆಗೆ ಸರಿಯಾದ ಮಾಹಿತಿ ನೀಡದೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮಾತಿನ ಚಾಟಿಗೆ ಕಂಗಾಲಾದ ಪ್ರಸಂಗ ಜರುಗಿತು. ತಮ್ಮ ಇಲಾಖೆ ವ್ಯಾಪ್ತಿಯಲ್ಲಿ ಕೈಗೊಂಡ ಕಾರ್ಯಗಳ ಬಗ್ಗೆ ಅಸ್ಪಷ್ಟ ಮಾಹಿತಿ ನೀಡಿದರು. ಈ ವೇಳೆ ಡಿಸಿಎಂ, ಶಾಸಕ ಎ.ಮಂಜುನಾಥ್, ಡಿಸಿ, ಸಿಇಒ ಹೀಗೆ ಯಾರು ಏನೇ ಕೇಳಿದರೂ ಯಾವುದಕ್ಕೂ ಸ್ಪಷ್ಟ ಉತ್ತರ ನೀಡಲಿಲ್ಲ. ಅಕ್ರಮ ಎಸಗಿದವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲು ಮಾಡಲು ಬರೋಲ್ಲ ಎನ್ನುವ ಉತ್ತರ ನೀಡಿದ್ದರಿಂದ ಆಕ್ರೋಶಗೊಂಡ ಡಿಸಿಎಂ, ಹಾಗಾದರೆ ನಿಮ್ಮ ಹೇಳಿಕೆಯನ್ನು ರೆಕಾರ್ಡ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ನರೇಗಾ ವ್ಯಾಪ್ತಿಗೆ ಅಡಕೆ
    ಅಡಕೆಯನ್ನು ನರೇಗಾ ಯೋಜನೆಯಡಿ ಸೇರಿಸಲು ಅಗತ್ಯ ಕ್ರಮ ವಹಿಸುವಂತೆ ಡಿಸಿಎಂ ಅಶ್ವತ್ಥನಾರಾಯಣ ಹೇಳಿದರು. ಈ ವೇಳೆ ಮಾತನಾಡಿದ ತೋಟಗಾರಿಕೆ ಇಲಾಖೆ ಡಿಡಿ ಮುನೇಗೌಡ, ಮಾಗಡಿಯಲ್ಲಿ ಸುಮಾರು 2500 ಎಕರೆಯಲ್ಲಿ ಅಡಕೆ ಬೆಳೆಯಲಾಗುತ್ತದೆ. ನರೇಗಾ ವ್ಯಾಪ್ತಿಗೆ ಸೇರಿಸುವಂತೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು. ಇದಕ್ಕೆ ದನಿಗೂಡಿಸಿದ ಜಿಪಂ ಸಿಇಒ ಇಕ್ರಂ, ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ, ಬಹುತೇಕ ನರೇಗಾ ವ್ಯಾಪ್ತಿಗೆ ಸೇರ್ಪಡೆಯಾಗಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts