More

    ಎಲ್ಲ ಕೆರೆಗಳಿಗೂ ನೀರು ತುಂಬಿಸಲು ಕ್ರಮ

    ಗುಂಡ್ಲುಪೇಟೆ: ತಾಲೂಕಿನ ಎಲ್ಲ ಕೆರೆಗಳಿಗೂ ನದಿ ಮೂಲದಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಎಸ್.ನಿರಂಜನಕುಮಾರ್ ಹೇಳಿದರು.

    ಮಳವಳ್ಳಿ ಗ್ರಾಮದಲ್ಲಿ ಶುಕ್ರವಾರ ಗ್ರಾಮಸ್ಥರೊಂದಿಗೆ ಕೆರೆಗೆ ಬಾಗಿನ ಸಲ್ಲಿಸಿ ಮಾತನಾಡಿದ ಅವರು, ತಾಲೂಕಿಗೆ ಯಾವುದೇ ನೀರಾವರಿ ಮೂಲಗಳೂ ಇಲ್ಲ. ಹೀಗಾಗಿ ಮಳೆಯನ್ನೇ ಆಶ್ರಯಿಸಬೇಕಿದ್ದು, ಮಳೆ ಕೊರತೆಯಿಂದ ಕೊಳವೆ ಬಾವಿಗಳಲ್ಲಿ ನೀರಿಲ್ಲದೆ ರೈತರು ವ್ಯವಸಾಯ ಮಾಡಲು ಸಾಧ್ಯವಾಗದಂತಾಗಿತ್ತು. ಈ ಬಾರಿ ಉತ್ತಮ ಮಳೆ ಬಿದ್ದರೂ ನಾನಾ ಕಾರಣಗಳಿಂದ ಮಳವಳ್ಳಿ ಸೇರಿದಂತೆ ಹಲವಾರು ಕೆರೆಗಳಿಗೆ ನೀರು ಬಾರದೆ ಆ ಭಾಗದ ರೈತರು ಆತಂಕಕ್ಕೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ತಾಲೂಕಿನ ಎಲ್ಲ ಕೆರೆಗಳಿಗೂ ನದಿ ಮೂಲದಿಂದ ನೀರು ತುಂಬಿಸಲಾಗುತ್ತಿದೆ ಎಂದರು.

    ತಾಲೂಕಿನ ಬೇಗೂರು ಹೋಬಳಿಯ ಕಮರಹಳ್ಳಿ ಕೆರೆಯಿಂದ ಪೈಪ್‌ಲೈನ್ ಮೂಲಕ ಗರಗನಹಳ್ಳಿ, ಹಳ್ಳದಮಾದಹಳ್ಳಿ, ರಾಘವಾಪುರ ಕೆರೆಗಳಿಗೆ ನೀರು ತುಂಬಿಸಿದ ನಂತರ ಮಳವಳ್ಳಿ ಕೆರೆಗೆ ನೀರು ಹರಿಸಲಾಗಿತ್ತು. ಕೆರೆ ಕೋಡಿ ಬಿದ್ದ ನೀರು ಸಮೀಪದ ಬೆಂಡಗಳ್ಳಿ ಕೆರೆಯತ್ತ ಹರಿಯುತ್ತಿದೆ. 2012ರಲ್ಲಿ ಯಡಿಯೂರಪ್ಪ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 212 ಕೋಟಿ ರೂ. ಅನುದಾನ ನೀಡಿದ್ದರಿಂದ ಇಂದು ತಾಲೂಕು ಸಮೃದ್ಧಿಯಿಂದ ಕೂಡಿದೆ. ಸದ್ಯ ಎಲ್ಲೇ ಕೊಳವೆ ಬಾವಿ ಕೊರೆದರೂ ಕೆಲವೇ ಅಡಿಗಳಿಗೆ ನೀರು ದೊರಕುತ್ತಿದೆ. ಕ್ಷೇತ್ರದ ಎಲ್ಲ ಕೆರೆಗಳಿಗೂ ನೀರು ತುಂಬಿಸಲು 110 ಕೆರೆಗಳ ಯೋಜನೆ ರೂಪಿಸಲಾಗಿದ್ದು, ಸದ್ಯದಲ್ಲಿಯೇ ಚಾಲನೆ ದೊರಕಲಿದೆ ಎಂದು ಹೇಳಿದರು.

    ನೇನೆಕಟ್ಟೆ ಗ್ರಾಪಂ ಅಧ್ಯಕ್ಷೆ ಪುಟ್ಟಮ್ಮ, ಉಪಾಧ್ಯಕ್ಷೆ ರೇಖಾ, ಹಾಪ್ ಕಾಮ್ಸ್ ಜಿಲ್ಲಾಧ್ಯಕ್ಷ ಕೆ.ಆರ್.ಲೋಕೇಶ್, ಎಪಿಎಂಸಿ ಅಧ್ಯಕ್ಷ ರವಿ, ಪಿಕಾರ್ಡ್ ಬ್ಯಾಂಕ್ ಉಪಾಧ್ಯಕ್ಷ ಮಹೇಶ್, ನಾಗೇಂದ್ರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts