More

    ಎಲ್ಲ ಕ್ಷೇತ್ರಗಳಿಗೂ ಅಪಾರ ಕೊಡುಗೆ ನೀಡಿದ ಬಾಬೂಜಿ

    ಸರಗೂರು: ಡಾ.ಬಾಬು ಜಗಜೀವನ ರಾಮ್ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲ ಕ್ಷೇತ್ರಗಳಿಗೂ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ ಎಂದು ಸಫಾಯಿ ಕರ್ಮಚಾರಿ ಆಯೋಗ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಶ್ಲಾಘಿಸಿದರು.

    ತಾಲೂಕಿನ ಬಿ. ಮಟಕೆರಿ ಗ್ರಾಪಂ ವ್ಯಾಪ್ತಿಯ ಮಟಕೆರೆ ಎಸ್‌ಸಿ ಕಾಲನಿ ಗ್ರಾಮದಲ್ಲಿ ಸೋಮವಾರ ಡಾ.ಬಾಬು ಜಗಜೀವನ ರಾಮ್ ಪುತ್ಥಳಿ ಅನಾವರಣಗೊಳಿಸಿ ಅವರು ಮಾತನಾಡಿದರು.
    ಸಮಾಜದಲ್ಲಿ ಅಸ್ಪಶ್ಯತೆ ಹೋಗಲಾಡಿಸುವಲ್ಲಿ ಬಾಬೂಜಿ ಕೊಡುಗೆ ಅಪಾರ. ಜಾತಿ ವ್ಯವಸ್ಥೆಯನ್ನು ತೊಡೆದುಹಾಕಿ ಎಲ್ಲರಲ್ಲೂ ಸಮಾನತೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು. ದೇಶದಲ್ಲಿ ಸಮರ್ಪಕವಾಗಿ ಎಲ್ಲರಿಗೂ ಆಹಾರ ದೊರೆಯದಿದ್ದಾಗ ಕೇಂದ್ರದಲ್ಲಿ ಕೃಷಿ ಸಚಿವರಾಗಿ ಗಣನೀಯ ಬದಲಾವಣೆ ತಂದರು. ಹಸಿರು ಕ್ರಾಂತಿ ರೂಪಿಸಿ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಯಾಗಿಸಿದರು. ಆಹಾರ ಉತ್ಪಾದನೆ ಹೆಚ್ಚಿಸಿದರು ಎಂದು ಹೇಳಿದರು.

    ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಪಟ್ಟಿಗೆ ಭಾರತವನ್ನು ಸೇರಿಸುವಲ್ಲಿ ಜಗಜೀವನ ರಾಮ್ ಪಾತ್ರ ಮಹತ್ವದ್ದಾಗಿದೆ. ಸಾಮಾಜಿಕ ಸುಧಾರಣೆ, ಹಸಿರು ಕ್ರಾಂತಿ ಸೇರಿದಂತೆ ಹಲವಾರು ಕ್ಷೇತ್ರಗಳ ಅಭಿವೃದ್ಧಿಯಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ ಎಂದು ಹೇಳಿದರು.

    ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ ಮಾತನಾಡಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ಸಾಧಿಸಿದ್ದಾರೆ. ಅವರ ಯೋಜನೆ ಮತ್ತು ವಿಚಾರ ಫಲವಾಗಿ ಹಿಂದುಳಿದ ವರ್ಗಗಳು ಸ್ವತಂತ್ರ ಜೀವನ ಸಾಗಿಸಲು ಸಾಧ್ಯವಾಗಿದೆ. ಬಾಬು ಜಗಜೀವನ್ ರಾಮ್ ಹಾಗೂ ಅಂಬೇಡ್ಕರ್ ಜಯಂತಿಯನ್ನು ಕೇವಲ ಜಾತಿಗೆ ಸೀಮಿತವಾಗಿಸದೆ, ಎಲ್ಲರೂ ಸೇರಿ ಆಚರಿಸಬೇಕು. ಅವರ ತತ್ವ ಸಿದ್ಧಾಂತಗಳನ್ನು ಅನುಸರಿಸಿಕೊಂಡು ಹೋಗಬೇಕು ಎಂದರು.

    ಜೆಡಿಎಸ್ ಯುವ ಮುಖಂಡ ಜಯಪ್ರಕಾಶ್, ಬಾಬು ಜಗಜೀವನರಾಮ್ ವಿಚಾರ ವೇದಿಕೆ ಅಧ್ಯಕ್ಷ ಸಿ.ತಿಮ್ಮಯ್ಯ, ಗೌರವಾಧ್ಯಕ್ಷ ಪರಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಚನ್ನಿಪುರಮಲ್ಲೇಶ್, ಮಾಜಿ ಅಧ್ಯಕ್ಷ ಪಿ.ನಾಗರಾಜು, ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ಶಾಸಕ ಅನಿಲ್ ಚಿಕ್ಕಮಾದು ಅವರ ತಾಯಿ ನಾಗಮ್ಮ, ಸಮಿತಿ ಅಧ್ಯಕ್ಷ ಜಯಕುಮಾರ್, ಉಪಾಧ್ಯಕ್ಷ ಶಿವರಾಜು, ಖಜಾಂಚಿ ಆನಂದ್, ಗ್ರಾಮದ ಯಜಮಾನ ಜವರಯ್ಯ, ಗುಡಿಗೌಡರು ಆನಂದ್, ಸಣ್ಣಪ್ಪ, ಪ್ರಕಾಶ್, ರಾಮಯ್ಯ, ಶಿವಕುಮಾರ್, ಹಂಚೀಪುರ ಸುರೇಶ್, ಕಲ್ಲಂಬಾಳು ನಾಗಣ್ಣ, ತೆಂಗಿನಕಾಯಿ ವ್ಯಾಪಾರಿ ಚೆಲುವರಾಜು, ತಾಪಂ ಮಾಜಿ ಉಪಾಧ್ಯಕ್ಷ ವೈಕುಂಠಯ್ಯ, ಗ್ರಾಪಂ ಅಧ್ಯಕ್ಷೆ ರೂಪಾ ಭಾಯಿಮಲ್ಲ ನಾಯಕ, ಸದಸ್ಯ ವಿನೋದ ಶ್ರೀನಿವಾಸ, ಗ್ರಾಪಂ ಪಿಡಿಒ ಭಾಗ್ಯಾ, ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕುರ್ಣೆಗಾಲ ಬೆಟ್ಟಸ್ವಾಮಿ, ನಾಗರಾಜು, ಉಪಾಧ್ಯಕ್ಷ ಮೈಸೂರು ಜಿಲ್ಲಾ ಜೆಡಿಎಸ್ ಯುವ ಮುಖಂಡ ವಿನೋದ್ ಪ್ರಸಾದ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts