More

    ಎಲ್ಲ ಶುದ್ಧ ನೀರಿನ ಘಟಕ ಬಂದ್!

    ಮಂಜುನಾಥ ಕೋಳಿಗುಡ್ಡ ಬೆಳಗಾವಿ: ಮಹಾನಗರ ಜನರ ಆರೋಗ್ಯ ದೃಷ್ಟಿಯಿಂದಾಗಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಇದೀಗ ‘ಅಶುದ್ಧ ಘಟಕ’ಗಳಾಗಿವೆ.!

    ನಗರದಲ್ಲಿನ ಬಡವರಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಕಾರ್ಮಿಕರಿಗೆ, ದೂರದ ಊರುಗಳಿಂದ ನಗರಕ್ಕೆ ಬರುವ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಉದ್ದೇಶದಿಂದ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಸುಮಾರು 1.20 ಕೋಟಿ ರೂ. ವೆಚ್ಚದಲ್ಲಿ 12 ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲಾಗಿತ್ತು. ಆದರೆ, ಮಹಾನಗರ ಪಾಲಿಕೆ, ಸ್ಮಾರ್ಟ್‌ಸಿಟಿ ಇಂಜಿನಿಯರ್‌ಗಳ ನಡುವಿನ ಸಮನ್ವಯ ಕೊರತೆ ಹಾಗೂ ನಿರ್ವಹಣೆ ಇಲ್ಲದೆ ಎಲ್ಲ ನೀರಿನ ಘಟಕಗಳು ಬಂದ್ ಆಗಿವೆ. ಇದರಿಂದಾಗಿ ಕೋಟ್ಯಂತರ ರೂ. ಅನುದಾನ ವ್ಯರ್ಥವಾಗಿದೆ.

    ಸ್ಮಾರ್ಟ್‌ಸಿಟಿ ಯೋಜನೆ ಅಡಿಯಲ್ಲಿ 2019-20ನೇ ಸಾಲಿನ ಅವಧಿಯಲ್ಲಿ ತಲಾ 8-10 ಲಕ್ಷ ರೂ. ವೆಚ್ಚದಲ್ಲಿ 12 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿತ್ತು. ಬಳಿಕ ಇವುಗಳ ನಿರ್ವಹಣೆ ಜವಾಬ್ದಾರಿಯನ್ನು ಖಾಸಗಿ ಏಜೆನ್ಸಿಗೆ ವಹಿಸಲಾಗಿತ್ತು. ಆದರೆ, ಘಟಕಗಳಲ್ಲಿನ ಕಳಪೆ ವಸ್ತುಗಳು, ಸಮರ್ಪಕ ನಿರ್ವಹಣೆ ಕೊರತೆ ಹಾಗೂ ನೀರು ಪೂರೈಕೆಯಾಗದಿರುವ ಹಿನ್ನೆಲೆಯಲ್ಲಿ 2021ರಿಂದಲೇ ಘಟಕಗಳು ಬಂದ್ ಆಗಿವೆ. ಬಳಿಕ ದುರಸ್ತಿ ಕೆಲಸವೂ ನಡೆದಿಲ್ಲ.

    ಆರಂಭದಲ್ಲಿ ನೀರಿನ ಘಟಕಗಳು ಉತ್ತಮವಾಗಿ ಕಾರ್ಯನಿರ್ವಹಿಸಿದವು. ನಂತರದ ದಿನಗಳಲ್ಲಿ ಘಟಕಗಳು ಸ್ಥಗಿತಗೊಂಡಿವೆ. ಇದೀಗ ಸ್ಮಾರ್ಟ್‌ಸಿಟಿ ಯೋಜನೆಯ ಅಧಿಕಾರಿಗಳು ನಿರ್ವಹಣೆ ಜವಾಬ್ದಾರಿ ನಮ್ಮದಲ್ಲ. ಮಹಾನಗರ ಪಾಲಿಕೆ ಮಾಡಬೇಕು ಎನ್ನುತ್ತಾರೆ. ಮತ್ತೊಂದೆಡೆ ಸ್ಮಾರ್ಟ್‌ಸಿಟಿ ಅಧಿಕಾರಿಗಳು ಸ್ಥಗಿತಗೊಂಡಿರುವ ಘಟಕ ಹಸ್ತಾಂತರಿಸಿದ್ದಾರೆ ಎಂದು ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ದೂರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts