More

    ಎಲ್ ಆ್ಯಂಡ್ ಟಿ ವಿರುದ್ಧ ಸರ್ಕಾರಕ್ಕೆ ವರದಿ ನೀಡಿ – ಶಾಸಕ ಅಭಯ ಪಾಟೀಲ

    ಬೆಳಗಾವಿ: ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯವ ನೀರಿನ ಸಮಸ್ಯೆ, ಕಾಮಗಾರಿಗಳ ಪರಿಶೀಲನೆಗೆ ಅಧಿಕಾರಿಗಳು ಸ್ಥಳಕ್ಕೆಭೇಟಿ ನೀಡಿ ವರದಿ ಸಲ್ಲಿಸಬೇಕು. ಜನತೆಗೆ ಸರಿಯಾಗಿ ನೀರು ಪೂರೈಸದ ಎಲ್ ಆ್ಯಂಡ್ ಟಿ ಕಂಪನಿ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ವರದಿ ನೀಡಬೇಕು ಎಂದು ಶಾಸಕ ಅಭಯ ಪಾಟೀಲ ಸೂಚಿಸಿದ್ದಾರೆ.

    ಪಾಲಿಕೆ ಸಭಾಂಗಣದಲ್ಲಿ ಇತ್ತೀಚೆಗೆ ಕುಡಿಯುವ ನೀರಿನ ಸಮಸ್ಯೆ, ಕಾಮಗಾರಿಗಳ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿ ನಗರಕ್ಕೆ ದಿನದ 24 ಗಂಟೆ ಕುಡಿಯುವ ನೀರು ಪೂರೈಕೆ ಮಾಡುವ ಜವಾಬ್ದಾರಿ ವಹಿಸಿಕೊಂಡಿರುವ ಎಲ್ ಆ್ಯಂಡ್ ಟಿ ಕಂಪನಿ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ನೀರಿನ ಸಮಸ್ಯೆ ಕುರಿತು ನಿರಂತರವಾಗಿ ಸಾರ್ವಜನಿಕರಿಂದ ದೂರು ಬರುತ್ತಿದ್ದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ತರಾಟೆ ತೆಗೆದುಕೊಂಡರು.

    8 ತಿಂಗಳಿಂದ ಎಲ್ ಆ್ಯಂಡ್ ಟಿ ಕಂಪನಿ ಕುಡಿಯುವ ನೀರಿನ: ಪೈಪ್‌ಲೈನ್, ಟ್ಯಾಂಕರ್ ನಿರ್ಮಾಣ ಸೇರಿ ಮತ್ತಿತರ ಕಾಮಗಾರಿ ಆರಂಭಿಸಿಲ್ಲ. ಹಳೇ ಮಾರ್ಗ ಬಂದ್ ಮಾಡುತ್ತಿರುವುದರಿಂದ ಸಮಸ್ಯೆ ಹೆಚ್ಚುತ್ತಿದೆ. ಕೂಡಲೇ ಕಾಮಗಾರಿ ಆರಂಭಿಸಬೇಕು.

    ಸ್ಮಾರ್ಟ್‌ಸಿಟಿ, ಬುಡಾ, ಪಾಲಿಕೆ, ಹೆಸ್ಕಾಂ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕಾಮಗಾರಿ ಸ್ಥಳ ಮತ್ತು ನೀರಿನ ಸಮಸ್ಯೆ ಎದುರಿಸುತ್ತಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು. ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಮಾತನಾಡಿ, ಎಲ್ ಆ್ಯಂಡ್ ಟಿ ಕಂಪನಿಯವರಿಗೆ ನಗರದಲ್ಲಿ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಲಾಗಿದೆ. ಆದರೆ, ಕಾಮಗಾರಿ ಆರಂಭಿಸುತ್ತಿಲ್ಲ. ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ.

    ಕಾಮಗಾರಿ ಪ್ರಾರಂಭಿಸಲು ಏಕೆ ವಿಳಂಬ ಮಾಡಲಾಗುತ್ತಿದೆ ಎಂಬುದನ್ನು ತಿಳಿಸಿ. ಇಲ್ಲವೇ ಕಾಮಗಾರಿ ಆರಂಭಿಸಿ ಎಂದು ಎಚ್ಚರಿಸಿದರು. ಬುಡಾ ಆಯುಕ್ತ ಪ್ರೀತಂ ನಸ್ಲಾಪುರೆ, ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರವೀಣ ಬಾಗೇವಾಡಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

    ವಿಜಯವಾಣಿ ವರದಿಗೆ ಸ್ಪಂದನೆ: ಉದ್ಯಮಬಾಗದ ವಾಲ್ಮೀಕಿ ನಗರದಲ್ಲಿ ಸಮಸ್ಯೆಗಳ ಕುರಿತು ‘ವಿಜಯವಾಣಿ’ಯಲ್ಲಿ ಸೋಮವಾರ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ವಾಲ್ಮೀಕಿ ನಗರಕ್ಕೆ ಕುಡಿಯುವ ನೀರು, ವಿದ್ಯುತ್ ಸೌಲಭ್ಯ ಕಲ್ಪಿಸಬೇಕು. ಅಲ್ಲದೆ, ಆ ಪ್ರದೇಶಕ್ಕೆ ಕುಡಿಯುವ ನೀರಿನ ಪೈಪ್‌ಲೈನ್ ಮಾರ್ಗ ಆರಂಭವಾಗುವವರೆಗೆ ನಿತ್ಯ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಸ್ಥಳೀಯರಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳು ಸೂಚಿಸದರು.

    ರಸ್ತೆ ಅಗೆದು ನಲ್ಲಿ ಸಂಪರ್ಕ ನೀಡಬೇಡಿ: ಬೆಳಗಾವಿ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ರಸ್ತೆಗಳ ನಿರ್ಮಾಣದ ಸಂದರ್ಭದಲ್ಲಿ ಪ್ರತಿ ನಿವೇಶನಕ್ಕೂ ನಲ್ಲಿ ಸಂಪರ್ಕ ನೀಡಲಾಗಿದೆ. ಅಲ್ಲದೆ, ರಸ್ತೆಪಕ್ಕದ 3 ಅಡಿ ಜಾಗದಲ್ಲಿ ವಿವಿಧ ಪೈಪ್‌ಲೈನ್ ಮಾರ್ಗ ಅಳವಡಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ನಗರದಲ್ಲಿ ಯಾವುದೇ ಕಾರಣಕ್ಕೂ ರಸ್ತೆ ಅಗೆದು ಹೊಸದಾಗಿ ನಲ್ಲಿ ಸಂಪರ್ಕ ನೀಡಬಾರದು. ರಸ್ತೆ ಅಗೆದು ಹಾಳು ಮಾಡಿದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಶಾಸಕ ಅಭಯ ಪಾಟೀಲ ಎಚ್ಚರಿಸಿದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts