More

    ಎಸ್‌ಎರ್‌ಎಸ್ ಕಾಲೇಜಿಗೆ 100ರಷ್ಟು ಫಲಿತಾಂಶ

    ಚಿತ್ರದುರ್ಗ: ನಗರದ ಎಸ್‌ಆರ್‌ಎಸ್ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ 100ರಷ್ಟು ಫಲಿತಾಂಶ ಲಭಿಸಿದೆ.

    ಒಟ್ಟು 448 ವಿದ್ಯಾರ್ಥಿಗಳ ಪೈಕಿ 343 ಮಂದಿ ಅತ್ಯುನ್ನತ ಶ್ರೇಣಿ, ವಿವಿಧ ವಿಷಯಗಳಲ್ಲಿ 51 ವಿದ್ಯಾರ್ಥಿಗಳು ಶೇ 100 ಅಂಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ವಿದ್ಯಾರ್ಥಿನಿ ಎಸ್.ನೇಹಾ 600ಕ್ಕೆ 586 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾಳೆ. ಚಂದ್ರಿಕಾ ಜಿ ಕಲ್ಯಾಣಿ, ಎಸ್.ಪ್ರಖ್ಯಾತ್ ಕ್ರಮವಾಗಿ 585, 584 ಅಂಕ ಗಳಿಸುವ ಮೂಲಕ ಕಾಲೇಜಿಗೆ ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ.

    ಉತ್ತಮ ಫಲಿತಾಂಶಕ್ಕೆ ಕೈಗೊಂಡ ಕ್ರಮಗಳಿಂದಾಗಿ ವಿದ್ಯಾರ್ಥಿಗಳು ಈ ಸಾಧನೆಗೈಯಲು ಕಾರಣವಾಗಿದೆ. ಎಸ್‌ಆರ್‌ಎಸ್ ಪಿಯು ಕಾಲೇಜು ಗುಣಮಟ್ಟದ ತರಬೇತಿ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ತಿಳಿಸಿದ್ದಾರೆ.

    ವಿದ್ಯಾರ್ಥಿಗಳು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ ಸುಜಾತಾ ಲಿಂಗಾರೆಡ್ಡಿ, ಉಪಾಧ್ಯಕ್ಷ ಬಿ.ಎಲ್.ಅಮೋಘ್, ಆಡಳಿತಾಧಿಕಾರಿ ಡಾ.ಟಿ.ಎಸ್.ರವಿ, ಪ್ರಾಂಶುಪಾಲ ಗಂಗಾಧರ್, ಉಪ ಪ್ರಾಂಶುಪಾಲ ಬಿ.ಮನೋಹರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts