More

    ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ರಾಜ್ಯದಲ್ಲೇ ಉಡುಪಿ ಪ್ರಥಮ, ದಕ ದ್ವಿತೀಯ ಸ್ಥಾನಕ್ಕೆ ಜಿಗಿತ

    ಮಂಗಳೂರು: ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯದಲ್ಲೇ ದ್ವಿತೀಯ ಸ್ಥಾನಕ್ಕೆ ಜಿಗಿದಿದೆ. ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ ( 624 ಅಂಕ) ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
    ಪ್ರಸಕ್ತ ವರ್ಷ ಉಡುಪಿ ಜಿಲ್ಲೆಯಲ್ಲಿ 14,092 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 13,246 ಮಂದಿ ಉತ್ತೀರ್ಣರಾಗಿದ್ದು, ಶೇ.14 ಫಲಿತಾಂಶ ದಾಖಲಾಗಿದೆ. ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ಸಹನಾ ತೃತೀಯ (623) ಸ್ಥಾನ ಪಡೆದಿದ್ದಾರೆ. ದಕ್ಷಿಣ ಕನ್ನಡದಲ್ಲಿ 29,701 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 27,360 ಮಂದಿ ಉತ್ತೀರ್ಣರಾಗಿದ್ದು, ಶೇ.92.12 ಫಲಿತಾಂಶ ದಾಖಲಾಗಿದೆ.
    ಕಳೆದ ವರ್ಷ 2022- 2023 ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯದಲ್ಲಿ 14 ನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನಕ್ಕೆ, ಕಳೆದ ವರ್ಷ 17 ನೇ ಸ್ಥಾನದಲ್ಲಿದ್ದ ದಕ ಜಿಲ್ಲೆ ಈ ವರ್ಷ ದ್ವಿತೀಯ ಸ್ಥಾನಕ್ಕೆ ಭಡ್ತಿ ಪಡೆದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts