More

    ಎಸ್‌ಟಿ ವರ್ಗಕ್ಕೆ ಕೊಡವ ಸಮುದಾಯ ಸೇರ್ಪಡೆಗೆ ಒತ್ತಾಯ


    ಮಡಿಕೇರಿ : ಕೊಡವ ಸಮುದಾಯನ್ನು ಎಸ್‌ಟಿ ವರ್ಗಕ್ಕೆ ಸೇರಿಸಿದರೆ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಕೊಡವ ಸಮಾಜ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅಭಿಪ್ರಾಯಪಟ್ಟರು.


    ಕೊಡವ ಪೊಮ್ಮಕ್ಕಡ ಕೂಟದಿಂದ ಕೊಡವ ಸಮಾಜದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಒತ್ತೋರ್ಮೆ ಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿ, ಕೊಡವ ಸಮಾಜದವರು ಒಗ್ಗಟ್ಟಾದಾಗ ಮಾತ್ರ ನಮ್ಮ ಬೇಡಿಕೆಗಳು ಈಡೇರಲು ಸಾಧ್ಯ. ಕೊಡವ ಪೊಮ್ಮಕ್ಕಡ ಕೂಟ ಜನಾಂಗದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು.


    ಹೆಣ್ಣಿಗೆ ಪೂಜ್ಯನೀಯ ಸ್ಥಾನ ನೀಡಲಾಗಿದೆ. ಹಾಗಾಗಿಯೇ ಭೂಮಿಯನ್ನು ತಾಯಿ ಎಂದು ಪೂಜಿಸುತ್ತೇವೆ. ಮಾತೃ ಸ್ವರೂಪಿಯಾದ ಹೆಣ್ಣು, ತನ್ನ ಮಕ್ಕಳಿಗೆ ಸಂಸ್ಕಾರ, ಗುಣ ಬೆಳೆಸಬೇಕು. ಅಲ್ಲದೆ, ಬಾಳುಗೊಡು ಸಮಾಜದಲ್ಲಿ ಮುಂದಿನ ಬಾರಿ ಹುತ್ತರಿ ಹಬ್ಬ ಆಚರಣೆ ಮಾಡಲಾಗುವುದು ಎಂದರು.
    ಕಳ್ಳಿಚಂಡ ಶಾಲಿನಿ ಕಾರ್ಯಪ್ಪ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಹಿಳೆಯರು ಒತ್ತಡದಲ್ಲಿ ಸಿಲುಕುತ್ತಿದ್ದಾರೆ. ಇಂತಹ ಮಹಿಳೆಯರಿಗೆ ಕುಟುಂಬದ ಪುರುಷರು ಸಹಕಾರ ನೀಡಿ ಒತ್ತಡದಿಂದ ಹೊರತರಬೇಕು ಎಂದು ಅಭಿಪ್ರಾಯಪಟ್ಟರು.


    ಚುಮ್ಮಕ್ಕ ಗ್ರೂಪ್ ಅಧ್ಯಕ್ಷೆ ಉದ್ದಪಂಡ ವಿಮಲ ಮಾತನಾಡಿ, ಮಹಿಳೆಯರಿಗೆ ಸಮಾನ ಅವಕಾಶ ದೊರೆಯುತ್ತಿಲ್ಲ. ಅವರಿಗೆ ಸಮಾನ ಅವಕಾಶ ನೀಡಬೇಕು ಎಂದರು.


    ಕೊಡವ ಪೊಮ್ಮಕ್ಕದ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಮಾತನಾಡಿ, ಕೊಡವ ಸಮುದಾಯದಲ್ಲಿ ಜನಸಂಖ್ಯೆ ಕ್ಷೀಣಿಸುತ್ತಿದೆ. ಈ ನಿಟ್ಟಿನಲ್ಲಿ ಸಮಾಜದಲ್ಲಿ ಮಕ್ಕಳ ಸಂಖ್ಯೆ ಹೆಚ್ಚುವಂತೆ ನಿರ್ಣಯ ಮಾಡಬೇಕು ಎಂದರು.


    ಈ ವೇಳೆ ಮೂರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವ ತಾಯಂದಿರನ್ನು ಚೀಟಿ ಎತ್ತುವುದರ ಮೂಲಕ ಆರಿಸಲಾಯಿತು. ಪುಚ್ಚಿಮಂಡ ರಾಧಾ ಕಾರ್ಯಪ್ಪ, ಮುಂಡಂಡ ರಾಣು ಮಂದಣ್ಣ, ಪಾಲಚಂಡ ಸೀಮಾ ಸನ್ಮಾನಕ್ಕೆ ಪಾತ್ರರಾದರು. ಮುಖ್ಯ ಅತಿಥಿಗಳಾಗಿದ್ದ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಹಾಗೂ ಶಾಲಿನಿ ಕಾರ್ಯಪ್ಪ ಅವರನ್ನು ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

    ಕೂಟದ ಹಿರಿಯ ಸಲಹೆಗಾರರಾದ ನಾಯಕಂಡ ಬೇಬಿ ಚಿಣ್ಣಪ್ಪ, ಉಪಾಧ್ಯಕ್ಷೆ ಅಮ್ಮುಣಿಚಂಡ ಈಶ್ವರಿ ಗಂಗಮ್ಮ, ಸಲಹಾ ಸಮಿತಿ ಸದಸ್ಯರಾದ ಬಿದ್ದಂಡ ರಾಣಿ, ಹಾಗೂ ನಾಯಕಂಡ ಬೇಬಿ ಚಿಣ್ಣಪ್ಪ ಇದ್ದರು. ಮಹಿಳೆಯರಿಗೆ ವಿವಿಧ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ನೀಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts