More

    ಎಸ್ಸಿ, ಎಸ್ಟಿ ಜನರ ರಕ್ಷಣೆ ಸರ್ವರ ಹೊಣೆ

    ಚಿತ್ರದುರ್ಗ: ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ನೆರವು ನೀಡುವುದರ ಜತೆಗೆ, ಒತ್ತಡ ಹಾಗೂ ರಾಜಿ ಸಂಧಾನಕ್ಕೆ ಒಳಗಾಗದೆ, ಅಪರಾಧಿಗಳಿಗೆ ಶಿಕ್ಷೆ ದೊರಕುವವರೆಗೂ ಕಾನೂನು ರೀತಿ ಸಂತ್ರಸ್ಥರಿಗೆ ನೈತಿಕ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಸೂಚಿಸಿದರು.
    ಡಿಸಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ 4ನೇ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಎಸ್ಸಿ, ಎಸ್ಟಿ ಜನರ ಮೇಲಿನ ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಅನ್ವಯ ದೌರ್ಜನ್ಯಕ್ಕೆ ಒಳಗಾದವರಿಗೆ ರಕ್ಷಣೆ ಒದಗಿಸಿ ಪರಿಹಾರ ನೀಡುವುದು ಅಧಿಕಾರಿಗಳಾದ ನಮ್ಮೆಲ್ಲರ ಹೊಣೆ ಎಂದರು.
    ಪ್ರಕರಣದ ವಿಚಾರಣೆಗೆ ಹಾಜರಾದರೆ ದಿನಭತ್ಯೆ ನೀಡಲಾಗುತ್ತಿದೆ. ನ್ಯಾಯಾಲಯಕ್ಕೆ ದೊಷಾರೋಪ ಪಟ್ಟಿ ಸಲ್ಲಿಸಿದರೂ ಶೇ.1ರಿಂದ 2ರಷ್ಟು ಪ್ರಕರಣಗಳಲ್ಲಿ ಮಾತ್ರ ಶಿಕ್ಷೆಯಾಗುತ್ತಿರುವುದು ಕಳವಳದ ಸಂಗತಿ. ಖುಲಾಸೆ ಪ್ರಕರಣಗಳು, ದೌರ್ಜನ್ಯಗಳ ಸಂಖ್ಯೆ ಹೆಚ್ಚಳಕ್ಕೆ ಪರೋಕ್ಷವಾಗಿ ಕಾರಣವಾಗುತ್ತವೆ. ಆದ್ದರಿಂದ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು ಎಂದು ಹೇಳಿದರು.
    ಜಿಲ್ಲೆಯಲ್ಲಿ 62,252 ಎಸ್ಸಿ, 49,441 ಎಸ್‌ಟಿ ಮಕ್ಕಳು 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದಾರೆ. ಇವರಲ್ಲಿ ಬಹಳಷ್ಟು ಮಂದಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿಲ್ಲ. ಶಿಕ್ಷಣ ಇಲಾಖೆ ಜಿಲ್ಲಾದ್ಯಂತ ಆಂದೋಲನ ನಡೆಸಿ ಅರ್ಜಿ ಹಾಕಿಸಬೇಕು. ಎಲ್ಲ ಶಾಲೆಗಳ ಮುಖ್ಯಶಿಕ್ಷಕರಿಗೆ ಸೂಕ್ತ ನಿರ್ದೇಶನ ನೀಡಬೇಕು. ಒಬ್ಬ ವಿದ್ಯಾರ್ಥಿ ಸೌಲಭ್ಯದಿಂದ ವಂಚಿತವಾದರೂ ಸಂಬಂಧಿಸಿದವರ ವಿರುದ್ಧ ಶಿಸ್ತು ಕ್ರಮ ಖಚಿತ ಎಂದು ಎಚ್ಚರಿಸಿದರು.
    ನಾಯಕನಹಟ್ಟಿ ಭಾಗದಲ್ಲಿ ಕೃಷಿ ಕಾರ್ಮಿಕರಾಗಿ ಮಕ್ಕಳು ಕಾರ್ಯನಿರ್ವಹಿಸುತ್ತಿರುವ ಕುರಿತಂತೆ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಡಿಸಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹ ಪ್ರಕರಣಗಳು ವರದಿಯಾಗುತ್ತಿವೆ. ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟದ ಅಧಿಕಾರಿಗಳು ಕಡಿವಾಣ ಹಾಕಲು ಶ್ರಮಿಸಬೇಕು. ನಿರ್ಲಕ್ಷೃವಹಿಸಿದರೆ ತಾಲೂಕು ಮಟ್ಟದ ಅಧಿಕಾರಿಗಳನ್ನು ಅನುಮಾತು ಮಾಡುವುದಾಗಿ ಹೇಳಿದರು.
    ಸಮಿತಿ ಸದಸ್ಯರಾದ ಅನಂತ್, ಡಿ.ಒ.ಮೊರಾರ್ಜಿ, ಒ.ಚಿನ್ನಪ್ಪ, ಬೋರಸ್ವಾಮಿ, ರಂಗಸ್ವಾಮಿ, ಜಿಪಂ ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಒ.ಪರಮೇಶ್ವರಪ್ಪ, ಡಿಡಿಪಿಐ ಕೆ.ರವಿಶಂಕರ್‌ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉ ಪನಿರ್ದೇಶಕಿ ಭಾರತಿ ಆರ್.ಬಣಕಾರ್, 2ನೇ ಜಿಲ್ಲಾ ಸತ್ರ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕಿ ನಾಗವೇಣಿ ಇತರರಿದ್ದರು.

    ಮಗ್‌ಶಾಟ್))) ಡಿಸಿ ದಿವ್ಯಾಪ್ರಭು

    *ಕೋಟ್
    ಜಿಲ್ಲಾ ಮಟ್ಟದಲ್ಲಿ ಪೊಲೀಸ್ ಇಲಾಖೆ ದೌರ್ಜನ್ಯ ತಡೆ ಸಭೆ ನಡೆಸಿದೆ. ಎಲ್ಲ ಠಾಣೆಗಳಲ್ಲೂ ದೌರ್ಜನ್ಯ ತಡೆ ಸಭೆ ನಡೆಸಲು ಸೂಚಿಸಲಾಗಿದೆ. ಸಮಾಜಕಲ್ಯಾಣ ಇಲಾಖೆ ಜಾಗೃತಿ ಕಾರ್ಯಕ್ರಮಗಳಲ್ಲಿ ಪಿಎಸ್‌ಐಗಳು ಪಾಲ್ಗೊಳ್ಳಲು ನಿರ್ದೇಶಿಸಲಾಗುವುದು. ದೌರ್ಜನ್ಯ ಪ್ರಕರಣಗಳ ಸಂತ್ರಸ್ಥರಿಗೆ ಪ್ರಕರಣ ಹಿಂಪಡೆಯುವಂತೆ, ರಾಜಿಗೆ ಒಳಗಾಗುವಂತೆ ಪೊಲೀಸ್ ಸಿಬ್ಬಂದಿ ಒತ್ತಡ ಹಾಕಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
    ಧರ್ಮೆಂದರ್‌ಕುಮಾರ್‌ಮೀನಾ, ಎಸ್‌ಪಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts