More

    ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 934 ವಿದ್ಯಾರ್ಥಿಗಳು

    ಯಳಂದೂರು: ತಾಲೂಕಿನಾದ್ಯಂತ ಶುಕ್ರವಾರ 934 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದರು. ಕರ್ನಾಟಕ ಪಬ್ಲಿಕ್ ಶಾಲೆ, ಜೆಎಸ್‌ಎಸ್ ಬಾಲಕಿಯರ ಪ್ರೌಢಶಾಲೆ, ಮೆಳ್ಳಹಳ್ಳಿ ಗ್ರಾಮದ ಆದರ್ಶ ವಿದ್ಯಾಲಯ, ಮದ್ದೂರು ಸರ್ಕಾರಿ ಪ್ರೌಢಶಾಲೆ ಸೇರಿದಂತೆ 4 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿತ್ತು. ಇಬ್ಬರು ಪುನರಾವರ್ತಿತ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 937 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಈ ಪೈಕಿ ಮೂವರು ವಿದ್ಯಾರ್ಥಿಗಳು ಗೈರಾಗಿ 934 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 9 ಅಂಗವಿಕಲ ಮಕ್ಕಳು ಪರೀಕ್ಷೆ ಬರೆದರು. ಪರೀಕ್ಷಾ ಅಕ್ರಮ ತಡೆಗಟ್ಟಲು ಸ್ಥಾನಿಕ ಜಾಗೃತ ದಳ ಸೇರಿದಂತೆ ಡಯಟ್ ಪ್ರಾಂಶುಪಾಲರು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts